ನವದೆಹಲಿ:ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ಪಟ್ಟಣದಲ್ಲಿ ಇಂದು ಬೆಳಿಗ್ಗೆ ರಾಜ್ಯ ಸಾರಿಗೆ (ಎಸ್‌ಟಿ) ಬಸ್‌ಗೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ.
ಎರಡು ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ. ಕಲೋಲ್ ಪಟ್ಟಣದಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಕೆಲವು ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ..
ಈ ಭೀಕರವಾದ ಅಪಘಾತದಿಂದ ಐವರು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಎಸ್‌ಟಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಐಷಾರಾಮಿ ಬಸ್ ಡಿಕ್ಕಿ ಹೊಡೆದಿದೆ ಎಂದು ಕಲೋಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
