ಚೆನ್ನೈ:ದೇವರ ಉತ್ಸವ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದು ಕುಟುಂಬದ ನಾಲ್ವರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಮಂಗಲಂ ಬಳಿಯ ವಿರುದುನಗರ-ಮದುರೈ ಹೆದ್ದಾರಿಯ ಶಿವರಕೊಟ್ಟೈನಲ್ಲಿ ನಡೆದಿದೆ.
ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೃತರನ್ನು ಮಣಿ, ನಾಗಜ್ಯೋತಿ, ಕನಗವೇಲ್, ಕೃಷ್ಣವೇಣಿ ಮತ್ತು ಪಾಂಡಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 8 ವರ್ಷದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
VIDEO | Five people were reportedly killed when a car collided with a two-wheeler on the Virudhunagar-#Maduraihighway in Sivarakottai near Tirumangalam earlier today. The accident was caught on CCTV.(Disturbing visuals. Viewers discretion is advised.)pic.twitter.com/Vl4rfsPMbc
ಇದನ್ನೂ ಓದಿ:RSS ಗಣವೇಷದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ನಾಯಕ
ವೈರಲ್​ ಆಗಿರುವ ವಿಡಿಯೋದಲ್ಲಿ ಬಿಳಿ ಬಣ್ಣದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆಯುತ್ತದೆ. ಬಳಿಕ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಬದಿಯ ಸರ್ವೀಸ್​ ರಸ್ತೆಯಲ್ಲಿ ಪಲ್ಟಿಯಾಗುವುದನ್ನು ನೋಡಬಹುದಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದೇವರತ ಉತ್ಸವ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಕಲ್ಲಿಕುಡಿ ಪೊಲೀಸ್​ ಅಧಿಕಾರಿಗಳು ಪರಿಶೀಲನೆ ನಡೆಸಿ ಮೃತದೇಹಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
