ಉತ್ತರಪ್ರದೇಶ:ಗುಡಿಸಲೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ಇಂದು ನಡೆದಿದೆ.
ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ಮಲಗಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಟೆಂಡರ್‌ಗಳು ಗ್ರಾಮಕ್ಕೆ ಧಾವಿಸಿದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆಯಲ್ಲಿ ಬೆಂಕಿ ನಂದಿಸಲು ಯತ್ನಿಸಿದ ಸತೀಶ್ ಅವರ ತಾಯಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮಗಳನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದ ತಂದೆ!
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಎಲ್ಲರೂ ಸಜೀವದಹನವಾಗಿದ್ದಾರೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಬಿಸಿಬಿಸಿ ಟೀಗಾಗಿ ಅತ್ತೆ-ಸೊಸೆ ನಡುವೆ ಜಗಳ; ಪ್ರಾಣ ಕಳೆದುಕೊಂಡ ವೃದ್ಧೆ
‘ಈ ಕುಟುಂಬ ಬೆಂಕಿಯಲ್ಲಿ ಸಜೀವ ದಹನವಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಾವು ವಿಧಿವಿಜ್ಞಾನ ತಂಡ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ಶ್ವಾನ ದಳದ ತಂಡವನ್ನು ತನಿಖೆಗೆ ಕರೆಸಿದ್ದೇವೆ. ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ’ ಎಂದು ಕಾನ್ಪುರ ದೇಹತ್ ಎಸ್ಪಿ ತಿಳಿಸಿದ್ದಾರೆ.
ಕಂಠಪೂರ್ತಿ ಕುಡಿದು ಪಾರ್ಟಿ ಮಾಡಿದ ತಂದೆ-ಮಗ; ಮತ್ತೊಂದು ಬಾಟಲ್​ಗೆ ಹಣ ಕೊಡದ ತಾಯಿ ಕಥೆ ಮುಗಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
