ಗಾಂಧಿನಗರ:ಬಸ್​ಗಾಗಿ ಕಾಯುತ್ತಿದ್ದ ಜನರ ಮೇಲೆ ಗುಜರಾತ್​ ಸಾರಿಗೆ ಸಂಸ್ಥೆಗೆ ಸೇರಿದ ಬಸ್​ ಹರಿದ ಕಾರಣ ಐವರು ಪ್ರಾಣ ಬಿಟ್ಟಿರುವ ಘಟನೆ ಗಾಂಧಿನಗರದ ಕಲೋಲ್​ನಲ್ಲಿ ನಡೆದಿದೆ.
ಘಟನೆ ಬೆಳಗ್ಗೆ 7:30ರ ಸುಮಾರಿಗೆ ನಡೆದಿದ್ದು ಬಸ್​​ಗಾಗಿ ಕಾಯುತ್ತಿದ್ದವರ ಮೇಲೆ ಸಾರಿಗೆ ಹರಿದಿದೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಅತಿ ವೇಗವಾಗಿ ಬಂದ ಖಾಸಗಿ ಬಸ್​ ಒಂದು ಗುಜರಾತ್​ ಸಾರಿಗೆ ಸಂಸ್ತೆಯ ಬಸ್​ಗೆ ಹಿಂಬದಯಿಂದ ಡಿಕ್ಕಿ ಹೊಡೆದ ಕಾರಣ ಬಸ್​ ಸ್ಟ್ಯಾಂಡ್​ನಲ್ಲಿ ನಿಂತಿದ್ದವರ ಮೇಲೆ ಹರಿದಿದೆ.
ಇದನ್ನೂ ಓದಿ:VIDEO| ಕಾರು​ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿತ್ತು ಕ್ಯಾಮರಾ!
ಮೃತ ದುರ್ದೈವಿಗಳನ್ನು ಶಾರದ ಜಗಾರಿಯಾ(50), ಬಲವಂತ್​ ಠಾಕೂರ್​(45), ದಿಲೀಪ್​ ಸಿನ್ಹ್ ವಿಹೋಲ್​(48), ಪಾರ್ಥ್​ ಪಟೇಲ್​(22), ಸಾವನ್​ ದರ್ಜಿ(21) ಎಮದು ಗುರುತಿಸಲಾಗಿದೆ.
ಘಟನೆಯಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜಾಗರೂಕತೆಯಿಂದ ಚಾಲನೆ ಮಾಡಿದ ಕಾರಣ ಖಾಸಗಿ ಸಂಸ್ಥೆಯ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
