ಭೋಪಾಲ್:ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾದಲ್ಲಿ ನಡೆದಿದೆ.
ಘಟನೆಯು ರಾಷ್ಟ್ರೀಯ ಹೆದ್ದಾರಿ 43ರಲ್ಲಿ ಸಂಭವಿಸಿದ್ದು, ಘುಂಗುಟಿ ಪೊಲೀಸ್​ ಠಾಣೆ ವ್ಯಾಪ್ತಿಯ ಮಜ್ಗಾವಾ ಗ್ರಾಮದ ಬಳಿ ಬೆಳಗಿನ ಜಾವ 3 ಘಂಟೆ ಸುಮಾರಿಗೆ ಅಪಘಾತ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Madhya Pradesh | Five people killed after a speeding car collided with a tree on NH 43 in Umaria district: Nivedita Naidu, Superintendent of Police Umaria district.
ಇದನ್ನೂ ಓದಿ:VIDEO| ಗುಜರಾತ್​ನಲ್ಲಿ ಸೇತುವೆ ಕುಸಿತ; 10 ಮಂದಿ ನೀರು ಪಾಲು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಸಬ್​ಇನ್ಸ್​ಪೆಕ್ಟರ್​ ಶೈಲೇಂದ್ರ ಚತುರ್ವೇದಿ ಉಮಾರಿಯಾದಿಂದ ಶೆಹದೋಲ್​ ಕಡೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತರೆಲ್ಲರೂ 30-35 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದ್ದು, ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಲಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಹಾಯಕ ಸಬ್​ಇನ್ಸ್​ಪೆಕ್ಟರ್​ ಶೈಲೇಂದ್ರ ಚತುರ್ವೇದಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
