ಉತ್ತರಾಖಂಡ:ರುದ್ರಪ್ರಯಾಗದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ. ಪರ್ವತದ ಮೇಲಿಂದ ದೊಡ್ಡ ದೊಡ್ಡ ಕಲ್ಲುಗಳು ಬಿದ್ದಿದ್ದರಿಂದ ಕಾರು ಅದರಲ್ಲಿ ಹೂತುಹೋಗಿದೆ. 12 ಗಂಟೆಗಳ ಸತತ ಪ್ರಯತ್ನದ ನಂತರ ಅವಶೇಷಗಳನ್ನು ಹೊರ ತೆಗೆಯಲಾಯಿತು. ಶನಿವಾರ ಕಾರಿನಲ್ಲಿ ಐದು ಮೃತದೇಹಗಳು ಪತ್ತೆಯಾಗಿದ್ದವು. ಇವರೆಲ್ಲರೂ ಗುಜರಾತ್‌ನಿಂದ ಕೇದಾರನಾಥ ದರ್ಶನಕ್ಕೆ ಬಂದಿದ್ದರು.
ಮತ್ತೊಂದೆಡೆ, ಶುಕ್ರವಾರ ತಡರಾತ್ರಿ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಆಲ್ಟೊ ಕಾರಿನ ಮೇಲೆ ಕಲ್ಲು ಬಿದ್ದು ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಈಶಾನ್ಯ ರಾಜ್ಯಗಳಾದ ಬಿಹಾರ, ಯುಪಿ, ಉತ್ತರಾಖಂಡ, ಹಿಮಾಚಲ, ಪಂಜಾಬ್ ಸೇರಿದಂತೆ 13 ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಇದೆ.
ಭಾರೀ ಮಳೆಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸಾಧಾರಣ ಮಳೆಗಾಗಲಿರುವ ಪ್ರದೇಶಗಳುಜಾರ್ಖಂಡ್, ಒಡಿಶಾ
ದೆಹಲಿಯಲ್ಲಿ ಬಿಸಿಲ ಝಳ ಹೆಚ್ಚಳ; ಈ 14 ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ ಐಎಂಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + six =
Remember me
