ಉತ್ತರಪ್ರದೇಶ:ಭಾರೀ ಆಲಿಕಲ್ಲು ಮಳೆಯಿಂದಾಗಿ ನೀರಲ್ಲಿ ಕೊಚ್ಚಿ ಹೋಗಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ನಡೆದಿದೆ.
ಮೃತರನ್ನು ಗೀತಾದೇವಿ, ಸಂತ್ರಾ, ರಾಜಕುಮಾರಿ, ಯಶೋದಿಯಾ ಮತ್ತು ರಾಜಪತಿ ಎಂದು ಗುರುತಿಸಲಾಗಿದೆ. ಭಾರೀ ಆಲಿಕಲ್ಲು ಮಳೆಯಿಂದಾಗಿ ನೀರಲ್ಲಿ ಕೊಚ್ಚಿ ಹೋಗಿ ಈ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಡ್ರೈ ಕ್ಲೀನ್‌ಗೆ ಬಟ್ಟೆ ಕೊಡೋಕೆ ಹೋದ ಮದುಮಗಳು 6 ಮಕ್ಕಳ ತಂದೆ ಜತೆ ಎಸ್ಕೇಪ್!
ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಶುಕ್ರವಾರ ಸಂಜೆ ವೇಳೆ ಮನೆಯಿಂದ ಹೊರಗೆ ಹೋಗಿದ್ದರು. ಮನೆಗೆ ಮರಳಿ ಬರದೆ ಇರುವುದನ್ನು ಅರಿತ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಶನಿವಾರ ಮುಂಜಾನೆ ನದಿಯ ದಡದಲ್ಲಿ ಮೂರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಶವವನ್ನು ರಾಂಪುರ ಬಾರ್ಕೋನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಮಾಡಲಾಗಿದೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ!ಗಾರ್ಹ್ವಾ ಗ್ರಾಮದ 4 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಭಾರೀ ಮಳೆ ಸುರಿದಾಗ ಕಟ್ಟಿಗೆ ಸಂಗ್ರಹಿಸಲು ಹೋಗಿದ್ದಾರೆ. ಈ ಸಮಯದಲ್ಲಿ ಪರ್ವತಗಳಿಂದ ಬಂದ ಭಾರಿ ಪ್ರಮಾಣದ ಆಲಿಕಲ್ಲು ಮಳೆಯ ನೀರು ಇವರನ್ನು ಕೊಚ್ಚಿಕೊಂಡು ಹೋಗಿದೆ. ತನಿಖೆ ನಡೆಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಷ್ಯಾದಲ್ಲೇ ಮೊದಲು; ಎರಡೂ ತೋಳುಗಳ ಯಶಸ್ವಿ ಶಸ್ತ್ರಚಿಕಿತ್ಸೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + six =
Remember me
