ರಾಯ್​ಪುರ್:ನಕ್ಸಲ್ ನಿಗ್ರಹ ‘ಕೋಬ್ರಾ’ ಪಡೆ ಹಾಗೂ ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿರುವ ಘಟನೆ ಛತ್ತಿಸ್​ಗಢ್​ದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಇಬ್ಬರು ನಕ್ಸ್​​ಲ್​ ಮೃತಪಟ್ಟಿದ್ದಾರೆ.
ಸಿಆರ್​ಪಿಎಫ್​ನ ಮೂವರು ಯೋಧರು ಹಾಗೂ ಬಿಜಾಪುರ ಜಿಲ್ಲಾ ಪೊಲೀಸ್ ಪಡೆಯ ಇಬ್ಬರು ಯೋಧರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜಾಫುರದ ಸಿಲಗರ್ ಅರಣ್ಯದಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮುಖಾಮುಖಿಯಾದ ಯೋಧರು ಹಾಗೂ ನಕ್ಸಲ್​ರು ಭೀಕರ ಗುಂಡಿನ ಕಾಳಗ ನಡೆಸಿದ್ದಾರೆ. ಗುಂಡಿನ ಕಾಳಗ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ನೀರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಛತ್ತಿಸ್​ಗಢದಲ್ಲಿ ನಕ್ಸಲರು ರಸ್ತೆ ಮಧ್ಯೆ ಇಟ್ಟಿದ್ದ ಐಇಡಿಗೆ ಮೂವರು ಜಿಲ್ಲಾ ಪೊಲೀಸ್ ಪಡೆಯ ಯೋಧರು ನಾರಾಯಣಪುರ್ ಜಿಲ್ಲೆಯಲ್ಲಿ ಹುತಾತ್ಮರಾಗಿದ್ದರು.
ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

VIDEO | ವರದಿಗಾರ್ತಿಯ ಮೈಕ್​ ಕಸಿದು ಓಡಿದ ನಾಯಿ! ಎಲ್ಲವೂ ಲೈವ್ ಟೆಲಿಕಾಸ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 3 =
Remember me
