ಲಡಾಖ್​:ಭಾರತ-ಚೀನಾ ಗಡಿ ಭಾಗದಲ್ಲಿರುವ ಬೇಗ್​ ಓಲ್ಡಿ ಪ್ರದೇಶದಲ್ಲಿ ನದಿ ದಾಟುತ್ತಿರುವಾಗ ಸೇನಾ ಟ್ಯಾಂಕರ್​ ಮುಳುಗಿದ ಪರಿಣಾಮ ಐವರು ಯೋಧರು ಮೃತಪಟ್ಟಿದ್ದಾರೆ. ಈ ಬಗ್ಗೆ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶನಿವಾರ (ಜೂನ್ 29) ಮುಂಜಾನೆ ಈ ಘಟನೆ ನಡೆದಿದ್ದು, ಟಿ -72 ಟ್ಯಾಂಕ್‌ನಲ್ಲಿ ಲಡಾಖ್‌ನ ಸಾಸರ್ ಬ್ರಂಗ್ಸಾ ಬಳಿಯ ಶ್ಯೋಕ್ ನದಿಯನ್ನು ದಾಟುತ್ತಿದ್ದ ವೇಳೆ ನೀರಿನ ಮಟ್ಟದಲ್ಲಿ ಏರಿಕೆ ಕಂಡ ಪರಿಣಾಮ ಸೇನಾ ಟ್ಯಾಂಕ್​ ಮುಳುಗಿತು. ಯೋಧರು ತರಬೇತಿಯ ಭಾಗವಾಗಿ ನದಿಯನ್ನು ತಮ್ಮ ಟ್ಯಾಂಕ್‌ನಲ್ಲಿ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಭಾರತೀಯ ಸೇನೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಿಳಿಸಿದೆ.
ಘಟನೆ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ನಮ್ಮ ಧೀರ ಸೈನಿಕರ ಆದರ್ಶಪ್ರಾಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಅಗಲಿದ ಕುಟುಂಬಗಳಿಗೆ ನನ್ನ  ಸಂತಾಪ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
On 28 Jun 2024 night, while deinducting from a military training activity, an army tank got stuck in the Shyok River, near Saser Brangsa, Eastern Ladakh due to sudden increase in the water level. Rescue teams rushed to the location, however, due to high current and water levels,…
Deeply saddened at the loss of lives of five of our brave Indian Army soldiers in an unfortunate accident while getting the tank across a river in Ladakh.We will never forget exemplary service of our gallant soldiers to the nation. My heartfelt condolences to the bereaved…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
