ಶ್ರೀನಗರ:ಒಳನುಸುಳುವಿಕೆ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಸೆದೆಬಡಿದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿರುವ ಗಡಿ ನಿಯಂತ್ರಣ ರೇಖೆಯ ಬಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಗುರುವಾರ ರಾತ್ರಿ ಕಾಶ್ಮೀರದ ಪೊಲೀಸರು ಮತ್ತು ಸೇನಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಈ ಮಾಹಿತಿಯನ್ನು ಕಾಶ್ಮೀರದ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾದ ವಿಜಯ್​ ಕುಮಾರ್​ ಖಚಿತ ಪಡಿಸಿದ್ದಾರೆ.
ಇದನ್ನೂ ಓದಿ:ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್​ಜಾಯ್: 125 ಕಿಮೀ ವೇಗದಲ್ಲಿ ಬೀಸಿದ ಮಾರುತ
ಸ್ಥಳದಲ್ಲಿ ಈಗಲೂ ಸೇನಾ ಕಾರ್ಯಾಚರಣೆ ಮುಂದುವರಿದಿದೆ. ಇತ್ತೀಚಗೆ ಉಗ್ರರ ಒಳನುಸುಳುವಿಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಸರಣಿ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದಾರೆ. ನಿನ್ನೆಯಷ್ಟೇ ಪೂಂಚ್​ ಸೆಕ್ಟರ್​ನಲ್ಲಿ ಒಳನುಸುಳುವಿಕೆಯನ್ನು ತಡೆಯಲಾಗಿತ್ತು.
ಫೆಬ್ರವರಿಯಿಂದ ಗಡಿ ನಿಯಂತ್ರಣ ರೇಖೆಯ ಬಳಿ 10 ಪ್ರಮುಖ ಒಳನುಸುಳುವಿಕೆಯ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿವೆ. ಆದಾಗ್ಯ ತನ್ನ ನರಿಬುದ್ದಿಯನ್ನು ಬಿಡದ ಪಾಕ್ ತನ್ನ ಉಗ್ರರನ್ನು ಭಾರತದ ಒಳಗಡೆ ಕಳುಹಿಸುವ ಯತ್ನದಲ್ಲಿ ತೊಡಗಿದೆ.(ಏಜೆನ್ಸೀಸ್​)
ಬೈಕ್​-ಸ್ಕೂಟಿ ನಡುವೆ ಅಪಘಾತ: ಓರ್ವ ವಿದ್ಯಾರ್ಥಿನಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ

ತುಮಕೂರಿನ ಅಪ್ರಾಪ್ತೆ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು: ಪೊಲೀಸ್ ತನಿಖೆಯಲ್ಲಿ ಭೀಕರತೆ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
