ಪಟ್ನಾ:ನವರಾತ್ರಿ ವಿಶೇಷಾರ್ಥ ಆಯೋಜಿಸಲಾಗಿದ್ದ ದುರ್ಗಾ ಪೂಜೆಯಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಐದು ವರ್ಷದ ಬಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ ಜಿಲ್ಲೆಯಲ್ಲಿ ನಡೆದಿದೆ.
ಗೋಪಾಲ್​ಗಂಜ್ ನಗರದ ರಾಜದಳ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಪಾಕ್​ ವಿರುದ್ಧ ಜಯ; ಅಫ್ಘಾನಿಸ್ತಾನದಲ್ಲಿ ಮುಗಿಲುಮುಟ್ಟಿದ ಸಂಭ್ರಮಾಚರಣೆ
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್, ಪ್ರಸಾದ ಸ್ವೀಕರಿಸುವ ವೇಳೆ ಬಾಲಕ ಕೆಳಗೆ ಬಿದ್ದ ಎಂಬ ಕಾರಣಕ್ಕೆ ಆತನನ್ನು ರಕ್ಷಿಸಲು ಇಬ್ಬರು ಮಹಿಳೆಯರು ಮುಂದಾಗಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಪ್ರದೇಶವನ್ನು ಸೀಲ್​ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
