ರಾಂಚಿ:ರಸ್ತೆಬದಿ ಗೋಲ್​​ಗಪ್ಪಾ ಸೇವಿಸಿದ ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಜಾರ್ಖಂಡ್​ನ ಕೊಡೆರ್ಮಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ 40 ಮಕ್ಕಳು, 10 ಮಂದಿ ಮಹಿಳೆಯರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಗಳ ಮಾದರಿಯನ್ನು ರಾಂಚಿಗೆ ಕಳುಹಿಸಲಾಗಿದೆ. ವರದಿ ಕೈಸೇರಿದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಬಾಡಿ ಬಿಲ್ಡರ್ ಮೃತ್ಯು; ಪ್ರಕರಣ ದಾಖಲು
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ (ACMO), ನಗರದ ಲೋಕೈಲೋಕೈ ಪಂಚಾಯತ್ ವ್ಯಾಪ್ತಿಯ ಗೋಸೈನ್ ಟೋಲಾದಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರಿಂದ ಗೋಲ್​ ಗಪ್ಪಾ ಸೇವಿಸಿದ ಬಳಿಕ 40 ಮಕ್ಕಳು ಮತ್ತು 10 ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ.
ಗೋಲ್​ಗಪ್ಪಾ ಸೇವಿಸಿದ ಬಳಿಕ ಮಹಿಳೆಯರು ಹಾಗೂ ಮಕ್ಕಳ ಆರೋಗ್ಯ ಹದಗೆಟ್ಟಿದ್ದು, ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಕಲುಷಿತ ಆಹಾರ ಸೇವನೆಯಿಂದಾಗಿ ಗೋಲ್​ಗಪ್ಪಾ ಸೇವಿಸಿದವರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವ್ಯಾಪಾರಿ ಬಳಿ ಇದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮಾದರಿಯನ್ನು ರಾಂಚಿಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ (ACMO) ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nineteen =
Remember me
