ಉದಯಪುರ:ದೇಶಾದ್ಯಂತ ಪಕ್ಷದ ಸಂಘಟನೆ ಬಲಗೊಳಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ/ಪಂಗಡ, ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತರ ಪ್ರಾತಿನಿಧ್ಯವನ್ನು ಸಂಘಟನೆಯ ಎಲ್ಲ ಹಂತಗಳಲ್ಲಿ ಶೇ. 50ಕ್ಕೆ ಏರಿಸಲು ಕಾಂಗ್ರೆಸ್ ಉದ್ದೇಶಿಸಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಈ ಸಂಬಂಧ ಗಂಭೀರ ಚರ್ಚೆ ನಡೆದಿದೆ. ಈ ಬಗ್ಗೆ ಪಕ್ಷದ ನಾಯಕ ಕೆ. ರಾಜು ಮಾಹಿತಿ ಹಂಚಿಕೊಂಡರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣಕ್ಕಾಗಿ ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆ ತರಲಾಗುವುದು. ಪಕ್ಷದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಮಿತಿ ಈ ಶಿಫಾರಸು ಮಾಡಿತ್ತು. ಭಾನುವಾರದಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲು್ಯಸಿ) ಸಭೆಯಲ್ಲಿ ಇದನ್ನು ಅನುಮೋದಿಸಲಾಗುವುದು ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಿಗೆ ನೆರವಾಗಲು ಸಾಮಾಜಿಕ ನ್ಯಾಯ ಸಲಹಾ ಮಂಡಳಿ ಸ್ಥಾಪಿಸಲು ರ್ಚಚಿಸಲಾಗಿದೆ. ಈ ಮಂಡಳಿ ಪಕ್ಷಕ್ಕೆ ಸಂಬಂಧಿಸಿದ ವಿಚಾರ, ಶಿಫಾರಸು ಪರಿಶೀಲಿಸಲಿದೆ. ದುರ್ಬಲ ವರ್ಗದ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಅಧಿವೇಶನ ಕರೆಯಲಾಗುವುದು. ರಾಷ್ಟ್ರೀಯ ಮಟ್ಟದಲ್ಲಿ, ಜಾತಿ ಆಧಾರಿತ ಜನಗಣತಿ ನಡೆಸಬೇಕೆಂದು ಬಯಸುತ್ತೇವೆ. ಖಾಸಗಿ ವಲಯದಲ್ಲಿ ಎಸ್​ಸಿ, ಎಸ್​ಟಿ ಮತ್ತು ಒಬಿಸಿಗೆ ಮೀಸಲಾತಿ ನೀಡುವುದು ಮತ್ತು ಮಹಿಳಾ ಮೀಸಲಾತಿ ಮಸೂದೆಯಲ್ಲಿ ಎಸ್​ಸಿ – ಎಸ್​ಟಿ ಮಹಿಳೆಯರಿಗೆ ಅವಕಾಶವನ್ನು ನೀಡಬೇಕೆಂದು ಬಯಸುತ್ತೇವೆ ಎಂದು ರಾಜು ವಿವರಿಸಿದ್ದಾರೆ.
ಪ್ರಿಯಾಂಕಾ ಅಧ್ಯಕ್ಷರಾಗಲಿ:ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಪ್ರಿಯಾಂಕಾ ಗಾಂಧಿ ನೇಮಿಸಬೇಕು ಎಂಬ ವಾದವೂ ಚಿಂತನ ಶಿಬಿರದಲ್ಲೂ ಕೇಳಿಬಂದಿದೆ. ಕಳೆದ 2 ವರ್ಷಗಳಿಂದ ರಾಹುಲ್ ಗಾಂಧಿ ಮನವೊಲಿಸುವ ಕೆಲಸ ನಡೆದಿದೆ. ಅವರು ಈ ಜವಾಬ್ದಾರಿ ಹೊರಲು ತಯಾರಿಲ್ಲ ಎಂದರೆ ಪ್ರಿಯಾಂಕಾ ಗಾಂಧಿ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣನ್ ಹೇಳಿದ್ದಾರೆ ಸೋನಿಯಾ ಮತ್ತು ಪ್ರಿಯಾಂಕಾ ಗಾಂಧಿ ಉಪಸ್ಥಿತಿಯಲ್ಲೇ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ದೀಪೇಂದ್ರ ಸಿಂಗ್ ಹೂಡಾ ಈ ವಾದ ಬೆಂಬಲಿಸಿದ್ದು, ಪ್ರಿಯಾಂಕಾ ಒಂದು ರಾಜ್ಯಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದಿದ್ದಾರೆ. ಕಾಂಗ್ರೆಸ್ ಗುಜರಾತ್ ರಾಜ್ಯ ಉಸ್ತುವಾರಿ ರಘು ಶರ್ಮ ಅವರು ಸಭೆಯಲ್ಲಿ ಮಾತನಾಡಿ, ಒಂದು ವೇಳೆ ಪಕ್ಷ ಸುಧಾರಣೆ ಕಾಣದಿದ್ದಲ್ಲಿ ಸಂಪೂರ್ಣ ರಾಜಕೀಯ ಪತನ ಕಾಣಲಿದ್ದೇವೆ. ಮುಂದಿನ ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಗೆಲ್ಲದಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಭರವಸೆ ಇರುವುದಿಲ್ಲ ಎಂದೂ ರಘು ಶರ್ಮ ಎಚ್ಚರಿಕೆ ನೀಡಿದ್ದಾರೆ.
ಎಂಎಸ್​ಪಿ ಖಾತರಿ ಕಾನೂನು:ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಖಾತರಿಪಡಿಸುವ ಕಾನೂನು ಜಾರಿಗೆ ಕಾಂಗ್ರೆಸ್ ಕರೆ ನೀಡಿದೆ. ರೈತರನ್ನು ಋಣಮುಕ್ತ ಎಂದು ಖಚಿತ ಪಡಿಸಿಕೊಳ್ಳುವುದು ಕಾನೂನಿನ ಗುರಿಯಾಗಿದೆ. ರದ್ದಾಗಿರುವ ಮೂರು ಕೃಷಿ ಕಾನೂನುಗಳ ಮರು ಜಾರಿಗೆ ಕೇಂದ್ರ ಪ್ರಯತ್ನಿಸಿದಲ್ಲಿ ಪಕ್ಷ ಕಟುವಾಗಿ ವಿರೋಧಿಸಲಿದೆ ಎಂದು ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿಯ ಮೇಲೆ ಹವಾಮಾನ ಬದಲಾವಣೆ ಪರಿಣಾಮ, ಸರ್ಕಾರದ ಬೆಳೆ ವಿಮೆಯ ಕಳಪೆ ಅನುಷ್ಠಾನ ಮತ್ತು ಸಾಂಸ್ಥಿಕ ಕ್ರೆಡಿಟ್ ಹೂಡಿಕೆ ಬಗ್ಗೆ ಚಿಂತನ ಶಿಬಿರದಲ್ಲಿ ರ್ಚಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಯುವಕರಿಗೆ ಆದ್ಯತೆ:ಕಾಂಗ್ರೆಸ್​ನಲ್ಲಿ ಯುವಕರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಿಳಿಸಿದ್ದಾರೆ. ಈ ಬಗ್ಗೆ ಮೂರು ದಿನಗಳ ಶಿಬಿರದ ನಂತರ ನೀಲಿನಕ್ಷೆ ಮತ್ತು ಮಾರ್ಗಸೂಚಿ ಹೊರಬೀಳಲಿದೆ ಎಂದರು. ಪಕ್ಷದ ಅರ್ಧದಷ್ಟು ನಾಯಕರು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಇದು ಸಿಎಂಗಳ ಆಯ್ಕೆಯಲ್ಲಿ ಪ್ರತಿಫಲಿಸಲಿದೆ ಎಂದ ಪೈಲಟ್, ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ವಾದವನ್ನು ಪುನರುಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
