ನವದೆಹಲಿ :ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 50,848 ಹೊಸ ಕರೊನಾ ಪ್ರಕರಣಗಳು ದಾಖಲಾಗಿದ್ದು, 1,358 ಸಾವು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಇಂದು ಬೆಳಗಿನ ವರದಿ ತಿಳಿಸಿದೆ. ನಿನ್ನೆ ವರದಿಯಾಗಿದ್ದ ನಿತ್ಯಪ್ರಕರಣಗಳಿಗಿಂತ ಇದು ಶೇ.19 ರಷ್ಟು ಹೆಚ್ಚಾಗಿದೆ. ಆದರೆ, ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,327 ರಷ್ಟು ಕಡಿಮೆಯಾಗಿದ್ದು, ಪ್ರಸ್ತುತ, ದೇಶದಲ್ಲಿ 6,43,194 ಸಕ್ರಿಯ ಕರೊನಾ ಪ್ರಕರಣಗಳಿವೆ.
ನಿನ್ನೆಯ ದಿನ 68,817 ಕರೊನಾ ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಭಾರತದ ಈವರೆಗಿನ ಚೇತರಿಕೆಯ ಸಂಖ್ಯೆ 2.89 ಕೋಟಿ ತಲುಪಿದೆ. ಕಳೆದ 40 ದಿನಗಳಿಂದ ಪ್ರತಿದಿನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯು ಹೊಸ ಪ್ರಕರಣಗಳ ಸಂಖ್ಯೆಗಿಂತ ಹೆಚ್ಚಾಗಿಯೇ ಮುಂದುವರಿದಿದೆ.
ಇದನ್ನೂ ಓದಿ:ಮಾಜಿ ಸಚಿವ ಎಂ.ವಿ.ಕೃಷ್ಣಪ್ಪರ ಪತ್ನಿ, ಸ್ವಾತಂತ್ರ್ಯ ಹೋರಾಟಗಾರ್ತಿ ಪ್ರಮೀಳಮ್ಮ ನಿಧನ
ಎಲ್ಲ ವಯಸ್ಕರಿಗೂ ತೆರೆದುಕೊಂಡಿರುವ ಉಚಿತ ಕರೊನಾ ಲಸಿಕಾ ಅಭಿಯಾನದಡಿ, ನಿನ್ನೆ 53.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.(ಏಜೆನ್ಸೀಸ್)
ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್ಆರ್​ಟಿಸಿ ಬಸ್ಸನ್ನು ವಾಪಸ್​ ಕಳುಹಿಸಿದ ಪೊಲೀಸರು
ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 193.65 ಕೋಟಿ ರೂ. ಅನುಮೋದನೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 4 =
Remember me
