ಪುಣೆ; ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಬಿಜೆಪಿ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಬರಹಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಪುಣೆ ಪೊಲೀಸರು 54 ಜನರ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ.
ಇತ್ತೀಚೆಗೆ ಕೋವಿಡ್ ನಿರ್ವಹಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಕುರಿತು ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಪ್ರದೀಪ ಗವಡೆ ಅವರು ಪುಣೆ ಪೊಲೀಸರಿಗೆ ದೂರು ನೀಡಿದ್ದರು.
ದೂರು ಆದರಿಸಿ ತನಿಖೆ ನಡೆಸಿದ ಪುಣೆ ಸೈಬರ್ ಪೊಲೀಸರು 54 ಜನರ ವಿರುದ್ಧ ಕ್ರಮ ಕೈಗೊಂಡಿದೆ.
ಕಳೆದ ಕೆಲ ದಿನಗಳ ಹಿಂದೆ ಎನ್ ಸಿಪಿ ಶಿವಸೇನಾ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಎನ್ ಸಿಪಿ ಮುಖಂಡರು ದೂರು ನೀಡಿದ್ದರು. ಒಂದು ರೀತಿ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನಾ ಎನ್ ಸಿಪಿ ಕಾರ್ಯಕರ್ತರ ನಡುವೆ ಸೈಬರ್ ವಾರ್ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ;ನರ್ಸ್​ ಕೆನ್ನೆಗೆ ಹೊಡೆದ ವೈರಲ್​ ವಿಡಿಯೋದಲ್ಲಿದ್ದ ಡಾಕ್ಟರ್​ ಶವ ಪತ್ತೆ! ಕುಟುಂಬದವರು ಹಾಗೆ ಮಾಡಿದ್ದಾದರೂ ಏಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
