ತರನ್​ ತಾರನ್​ (ಪಂಜಾಬ್):55 ವರ್ಷದ ಮಹಿಳೆಯೊಬ್ಬರನ್ನು ಮನಬಂದಂತೆ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಪಂಜಾಬ್​ನ ವಲ್ಟೋಹ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?
ಮಾರ್ಚ್ 31 ರಂದು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಅಳಿಯಂದಿರು ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ. ಅವರು ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತ್ರಸ್ತೆಯನ್ನು ಮೆರವಣಿಗೆ ನಡೆಸುತ್ತಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಐವರ ಪೈಕಿ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ ಎಂದು ಠಾಣಾಧಿಕಾರಿ ಸುನೀತಾ ಬಾವಾ ತಿಳಿಸಿದ್ದಾರೆ.  ಮಹಿಳೆಯ ತಾಯಿ ಕುಲ್ವಿಂದರ್ ಕೌರ್ ಮಣಿ, ಆಕೆಯ ಸಹೋದರರಾದ ಶರಣಜಿತ್ ಸಿಂಗ್ ಶಾನಿ ಮತ್ತು ಗುರ್ಚರಣ್ ಸಿಂಗ್ ಮತ್ತು ಕುಟುಂಬದ ಸ್ನೇಹಿತ ಸನ್ನಿ ಸಿಂಗ್ ರನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಡಿಯೋ ಮಾಡಲು ಬಳಸಲಾದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಐದನೇ ಆರೋಪಿ ಪರಾರಿಯಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಧೋನಿ, ರಾಹುಲ್​ಗಾಂಧಿ ಸಾರ್ವಕಾಲಿಕ ಬೆಸ್ಟ್‌ ಫಿನಿಷರ್ ಏಕೆ? ವಿವರಣೆ ನೀಡಿದ ಸೆಂಟ್ರಲ್​ ಮಿನಿಸ್ಟರ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
