ಶಿಮ್ಲಾ:ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಬೆಟ್ಟಕ್ಕೆ ಡಿಕ್ಕಿ ಹೊಡೆದ ಪರಿಣಾಮ 56 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪ್ರದೇಶದಲ್ಲಿ ನಡೆದಿದೆ.
ಬಸ್​ ತಿಂಜನುವಿನಿಂದ ಚಿದ್ಗಾಂವ್‌ಗೆ ತೆರಳುತ್ತಿದ್ದ ವೇಳೆ ಬರ್ಶೀಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣವಾಗಿರಬಹುದು. ಮೊದಲಿಗೆ ಚಾಲಕ ಪ್ರಯಾಣಿಕರ ಬಳಿ ಈ ಬಗ್ಗೆ ಹೇಳಿದ್ದಾನೆ. ಆ ನಂತರ ಬಸ್​ಅನ್ನು ಬೆಟ್ಟಕ್ಕೆ ಡಿಕ್ಕಿ ಹೊಡೆಸುವ ಮೂಲಕ ಕಂದಕಕ್ಕೆ ಉರುಳುವುದನ್ನು ತಪ್ಪಿಸಿದ್ಧಾನೆ.
ಇದನ್ನೂ ಓದಿ:ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ; ಐವರು ಆರೋಪಿಗಳು ಅರೆಸ್ಟ್​
ಅಪಘಾತದಲ್ಲಿ ಸುಮಾರು56ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳಿಗೆ ಚಿದ್ಗಾಂವ್​ ಸಮುದಾಯ ಕೇಂದ್ರ, ಸವಿಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಘಟನೆಯ ಕುರಿತು ಪೊಲೀಸ್​ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಇದು ಎರಡನೇ ಪ್ರಕರಣವಾಗಿದ್ದು ಗುರುವಾರ ಮಂಡಿ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
