ಲಖನೌ:ಬುಧವಾರ ಬೆಳಗ್ಗೆ ಎರಡು ಬಸ್​ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಪ್ರಯಾಣಿಕರು ದಾರುಣವಾಗಿ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶ ರಾಜಧಾನಿ ಲಖನೌ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಎರಡು ಬಸ್​ಗಳು ಕೂಡ ಸರ್ಕಾರಿ ಸಾರಿಗೆ ಸಂಸ್ಥೆಗೆ ಸೇರಿದ್ದಾಗಿವೆ. ಕಕೊರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಲಖನೌ-ಹರ್ದೋಯ್​ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿರುವುದಾಗಿ ಎಸಿಪಿ ಎಸ್​.ಎಂ ಕಾಸಿಮ್​ ಅಬ್ದಿ ಹೇಳಿದ್ದಾರೆ.
ಇದನ್ನೂ ಓದಿ:ಹಿಂದಿನ ಸಿಎಂ ಕೊಟ್ಟಿದ್ದನ್ನು ನಮ್ಮ ಸಿಎಂ ಕಿತ್ತುಕೊಂಡಿದ್ದಾರೆ: ಶಾಸಕ ಬಸನಗೌಡ ಪಾಟೀಲ್ ಅಸಮಾಧಾನ​
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸುಗಳು​ ಓವರ್​ಟೇಕ್​ ಮಾಡಲು ಯತ್ನಿಸಿ ಮುಖಾಮುಖಿ ಡಿಕ್ಕಿಯಾಗಿವೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಇನ್ನು ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ. ಮೂವರು ಸದಸ್ಯರ ಸಮಿತಿಯನ್ನು ರಚಿಸಿರುವ ಹೆದ್ದಾರಿ ಪ್ರಾಧಿಕಾರ ಘಟನೆಯ ಕುರಿತು ತನಿಖೆ ಮಾಡಿ 24 ಗಂಟೆಯೊಳಗೆ ವರದಿ ನೀಡುವಂತೆ ಸೂಚಿಸಿದೆ.(ಏಜೆನ್ಸೀಸ್​)
ಎರಡನೇ ಪತ್ನಿ, ಮಕ್ಕಳಿಗೆ ಆಸ್ತಿ ಸಿಗುತ್ತದೆಯೇ? ಬಾಂಬೆ ಹೈಕೋರ್ಟ್‌ ಹೇಳಿರುವುದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
