ಲಖನೌ:ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರ್​ ಜಿಲ್ಲೆಯಲ್ಲಿರುವ ದೆಹಲಿ-ಲಖನೌ ಎಕ್ಸ್​ಪ್ರೆಸ್​​ ಹೈವೇಯಲ್ಲಿ ನಡೆದಿದೆ.
ಅಪಘಾತದಲ್ಲಿ ಎರಡು ಕಾರುಗಳು ಜಖಂಗೊಂಡಿದ್ದು, ಪೊಲೀಸರು ಮೃತದೇಹಗಳನ್ನು ಹೊರತೆಗೆಯುವುದಕ್ಕೆ ಹರಸಾಹಸಪಟ್ಟಿದ್ದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
#WATCH| Hapur, UP: On the Hapur accident, Dr Sujeet from Community Health Center (CHC) Garhmukteshwar says, "… Two bodies were brought, then 4 more bodies were brought to the hospital. Police officials were present. We have handed over the bodies. The total number of deceased…https://t.co/r9JuckvzMmpic.twitter.com/1tfqTP47g6
ಇದನ್ನೂ ಓದಿ:ಮುಂಬೈ ತೊರೆದು ಕಲ್ಕತ್ತಾ ಸೇರ್ತಾರ ಹಿಟ್​​ಮ್ಯಾನ್​​?; ಪುಷ್ಠಿ ನೀಡುತ್ತಿವೆ ಫೋಟೋಗಳು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಹಾಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 09 ರ ಅಲ್ಲಾಭಕ್ಷಪುರ ಟೋಲ್ ಪ್ಲಾಜಾ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರು ಬರುತ್ತಿದ್ದ ಲಾರಿಗೆ ಗುದ್ದಿದೆ. ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಸ್ಥಿತಿ ಚಿಂತಾಜನಕವಾಗಿದೆ.
ಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರನ್ನು ಕಟ್​ ಮಾಡಿ ಮೃತದೇಹ ಹಾಗೂ ಗಾಯಾಳುಗಳನ್ನು ಹೊರತೆಗೆಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಜ್​ಕುಮಾರ್​ ಅಗರ್ವಾಲ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 1 =
Remember me
