ಕಲ್ಕತ್ತಾ:ಲಾರಿ ಹಾಗೂ ಅಂಬುಲೆನ್ಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಂಬುಲೆನ್ಸ್ ರೋಗಿಯೊಬ್ಬರನ್ನು​ ಮಿಡ್ನಾಪುರದ ಖಿರ್ಪೈ ಆಸ್ಪತ್ರೆಯಿಂದ ಮೇದಿನಿಪುರ ವೈದ್ಯಕೀಯ ಕಾಲೇಜಿಗೆ ಸಾಗಿಸುತ್ತಿತ್ತು. ಕೇಶ್​ಪುರದ ಬಳಿ ಪಂಚಮಿ ರಾಜ್ಯ ಹೆದ್ದಾರಿಯಲ್ಲಿ ಅಂಬುಲೆನ್ಸ್‌ ಸಿಮೆಂಟ್ ತುಂಬಿದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮರತಪಟ್ಟಿದ್ದು, ರೋಗಿ ಸೇರಿದಂತೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ಅನಿಮಾ ಮಲ್ಲಿಕ್, ಶ್ಯಾಮಪಾದ್​ ಬ್ಯಾಗ್, ಶ್ಯಾಮಲ್ ಭುನಿಯಾ, ಚಂದನಾ ಭುನಿಯಾ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
