ಜಾಜ್​ಪುರ: ಒಡಿಶಾದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಗೂಡ್ಸ್‌ ರೈಲಿಗೆ ಸಿಲುಕಿ ಕನಿಷ್ಠ ಆರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾಜ್​ಪುರ ರೋಡ್​ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಇದನ್ನೂ ಓದಿ:ಗೃಹಲಕ್ಷ್ಮೀ ಯೋಜನೆಯ ಅರ್ಜಿ ಹೀಗಿರಲಿದೆ ನೋಡಿ! 2000 ರೂ. ಪಡೆಯಲು ಯಾವ ದಾಖಲೆ ಕೊಡಬೇಕು?
ಕಾರ್ಮಿಕರು ರೈಲು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಂಡಮಾರುತದಿಂದಾಗಿ ದಿಢೀರ್ ಗುಡುಗು ಸಹಿತ ಮಳೆಯಾಗಿದೆ. ಕೂಡಲೇ ಕಾರ್ಮಿಕರು ಮಳೆಯಿಂದ ಪಾರಾಗಲು ಅಲ್ಲಿಯೇ ನಿಂತಿದ್ದ ಗೂಡ್ಸ್​​ ರೈಲಿನ ಅಡಿಯಲ್ಲಿ ಆಶ್ರಯವನ್ನು ಪಡೆದಿದ್ದಾರೆ.
ದುರದೃಷ್ಟವಶಾತ್​, ಈ ರೈಲನ್ನು ಯಾವುದೇ ಎಂಜಿನ್​ಗೆ ಜೋಡಿಸಿರಲಿಲ್ಲ. ಹೀಗಾಗಿ ಮಳೆ ಗಾಳಿಗೆ ಸಿಲುಕಿ ರೈಲು ತನ್ನಷ್ಟಕ್ಕೆ ತಾನೇ ಚಲಿಸಲು ಆರಂಭಸಿದ್ದು ಅಪಘಾತಕ್ಕೆ ಕಾರಣವಾಯಿತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರಿಗೆ ಸೂಕ್ತ ಚಿಕಿತ್ಸೆ ನೀಡಲು ಸಿಎಂ ಆದೇಶಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 5 =
Remember me
