ಜೈಪುರ:ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಲಾರಿಯೊಂದು ದಿಢೀರ್​ ಎಂದು ಯು-ಟರ್ನ್​ ಹೊಡೆದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಘಾತದ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
मुख्यमंत्री जी इन बजरी माफिया से डरने की जगह इन पर कार्यवाही कीजिएतीन दिन से@RajCMOपुलिस आपका निर्देश नही मान रही हैं।@PoliceRajasthanअभी तक ट्रक चालक को नही पकड़ सकी पूरा परिवार सदमे में हैं अगर परिवार के किसी अन्य सदस्य को आघात से नुकसान आपकी जिमेदारी होगी@BhajanlalBjppic.twitter.com/3GIjqpbC7t
ಇದನ್ನೂ ಓದಿ:ಈ ಕಂಡೀಷನ್​ಗಳನ್ನು ಪಾಸ್​ ಮಾಡಿದರೆ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಖಚಿತ!
ಮೃತರನ್ನು ಮನೀಷ್​ ಶರ್ಮಾ, ಕೈಲಾಶ್​ ಶರ್ಮಾ, ಸತೀಶ್​ ಶರ್ಮಾ, ಅನಿತಾ, ಸಂತೋಷ್​, ಪೂನಂ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವವರನ್ನು ಮನನ್​ ಹಾಗೂ ದೀಪಾಲಿ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಲಾರಿಯ ಸಮೇತ ಚಾಲಕ ಪರಾರಿಯಾಗಿದ್ದು, ಈತನ ಹುಡುಕಾಟಕ್ಕೆ ವಿಶೇಷ ತಂಡವನ್ನು ರಚಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಮಾಯಿ ಮಾಧೋಪುರ್ ಜಿಲ್ಲೆಯ ಹೆಚ್ಚುವರಿ ಎಸ್​ಪಿ ದಿನೇಶ್ ಕುಮಾರ್ ಅಪಘಾತಕ್ಕೀಡಾದವರು ಸವಾಯಿ ಮಾಧೋಪುರದಲ್ಲಿರುವ ಗಣೇಶನ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿ ಚಾಲಕನನ್ನು ಗುರುತಿಸಲಾಗಿದ್ದು, ಆತನನ್ನು ಶೀಘ್ರ ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − six =
Remember me
