ಉತ್ತರ ಪ್ರದೇಶ:ವೇಗವಾಗಿ ಬಂದ ಬೊಲೆರೊ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುದ ಘಟನೆ ಉತ್ತರಪ್ರದೇಶದ ಬಂದಾ ಎಂಬಲ್ಲಿ ನಡೆದಿದೆ.ಇದನ್ನೂ ಓದಿ:ಮೆಕ್ಸಿಕೋದಲ್ಲಿ ಹೀಟ್​ವೇವ್​ಗೆ 100ಕ್ಕೂ ಹೆಚ್ಚು ಜನ ಮೃತ!ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ತಿಲೌತಾ ಗ್ರಾಮದ ನಿವಾಸಿ ಗುಜ್ಜಿ ಎಂಬಾತನ ಮಗ ಕಲ್ಲು ರಾತ್ರಿ ಒಂಬತ್ತರ ಸುಮಾರಿಗೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದ್ದಾನೆ. ಕೂಡಲೇ ಆತನನ್ನು ಕರೆದುಕೊಂಡು ಕಲ್ಲುನ ತಾಯಿ ಸರ್ಬಾನೊ, ಮಕ್ಕಳಾದ ಕೈಫ್, ಚಿಕ್ಕಿ, ಚಾಲಕ ಹಸೀಂ ಸೇರಿ 8 ಮಂದಿ ಆಸ್ಪತ್ರೆಗೆ ಹೋಗುತ್ತಿದ್ದರು.ಈ ವೇಳೆ ಕೊತ್ವಾಲಿ ಪ್ರದೇಶದ ಕಮಾಸಿನ್ ರಸ್ತೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಬೊಲೆರೊ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸತ್ತಿದ್ದಾನೆ. ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.ಇದನ್ನೂ ಓದಿ:ಮೊದಲ ಡೇಟಿಂಗ್​ನಲ್ಲಿ ದೈಹಿಕ ಸಂಪರ್ಕ ಬೆಳೆಸಿದ್ದೀರಾ? ತಮನ್ನಾಗಿಂತ ವಿಜಯ್​ ಕೊಟ್ಟ ಉತ್ತರ ವೈರಲ್!​ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ದುರ್ಗಾಶಕ್ತಿ ನಾಗಪಾಲ್ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
