ನವದೆಹಲಿ:ನಿನ್ನೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯ ಮತದಾನದ ಪ್ರಮಾಣವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಫೆ.8ರಂದು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಆದರೆ ಚುನಾವಣೆ ಮುಗಿದು ಎಕ್ಸಿಟ್​ ಪೋಲ್​ ಹೊರಬಿದ್ದರೂ ಎಷ್ಟು ಪ್ರಮಾಣದ ವೋಟಿಂಗ್​ ಆಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳವಳ ವ್ಯಕ್ತಪಡಿಸಿದ್ದರು. ನಿಜಕ್ಕೂ ನನಗೆ ಶಾಕ್​ ಆಗುತ್ತಿದೆ ಎಂದಿದ್ದರು.
ಇದೀಗ ಅಂಕಿಸಂಖ್ಯೆಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಒಟ್ಟಾರೆ ಶೇ.62.59ರಷ್ಟು ಮತದಾನ ಆಗಿದೆ ಎಂದು ಆಯೋಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
2015ರ ಚುನಾವಣೆಯಲ್ಲಿ ಶೇ.67.47ರಷ್ಟು ಮತದಾನ ಆಗಿತ್ತು. ಅದಕ್ಕೆ ಹೋಲಿಸಿದರೆ ಕಡಿಮೆ ಆಗಲಿದೆ.ಚುನಾವಣೆ ಮುಗಿದ ಬಳಿಕ ನಡೆದ ಎಕ್ಸಿಟ್​ ಪೋಲ್​ ಪ್ರಕಾರ ಆಮ್​ ಆದ್ಮಿ ಪಾರ್ಟಿಯೇ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳೇ ಬಿಜೆಪಿ ಪಾಲಿಗೆ ಮುಳ್ಳಾಗಲಿದೆ ಎಂದು ಅಂದಾಜಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
