ನವದೆಹಲಿ:ಕಳೆದೆರಡು ದಿನಗಳಲ್ಲಿ 14 ರಾಜ್ಯಗಳಲ್ಲಿ ಒಟ್ಟು 647 ಕೋವಿಡ್​ 19 ಪ್ರಕರಣಗಳು ದೃಢಪಟ್ಟಿದೆ. ಇದಕ್ಕೆ ನವದೆಹಲಿಯ ನಿಜಾಮುದ್ದೀನ್​ನಲ್ಲಿ ಆಯೋಜನೆಗೊಂಡಿದ್ದ ತಬ್ಲಿಘಿ ಜಮಾತ್​ ಸಭೆ ಕಾರಣ ಎಂಬುದು ಸ್ಪಷ್ಟವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್​ವಾಲ್​ ಈ ವಿಷಯ ತಿಳಿಸಿದ್ದಾರೆ. ತಬ್ಲಿಘಿ ಜಮಾತ್​ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ 12 ಜನರು ಕಳೆದ 24 ಗಂಟೆಗಳಲ್ಲಿ ಮೃತಪಟ್ಟಿರುವುದಾಗಿಯೂ ಹೇಳಿದ್ದಾರೆ.ಭಾರತದಲ್ಲಿ ಇದುವರೆಗೆ 2,301 ಕೋವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, 56 ಮಂದಿ ಮೃತಪಟ್ಟಿದ್ದಾರೆ. ಗುರುವಾರದಿಂದ ಶುಕ್ರವಾರದ ನಡುವೆ 12 ಮಂದಿ ಸತ್ತಿದ್ದಾರೆ. ಗುರುವಾರದಿಂದೀಚೆಗೆ ಹೊಸದಾಗಿ 336 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 157 ಜನರು ಕರೋನಾ ವೈರಸ್​ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಹೆಚ್ಚಾಗುತ್ತಿರುವ ಸೋಂಕಿನ ಪ್ರಕರಣಗಳನ್ನು ಗಮನಿಸಿದಾಗ, ನಿರ್ದಿಷ್ಟವಾದ ಕಾರಣ ಇರುವಂತೆ ತೋರುತ್ತಿದೆ ಎಂದು ಪರೋಕ್ಷವಾಗಿ ತಬ್ಲಿಘಿ ಜಮಾತ್​ ಸಭೆಯನ್ನು ಉಲ್ಲೇಖಿಸಿದರು.
ದೇಶದಲ್ಲಿ ಲಾಕ್​ಡೌನ್​ ಘೋಷಿಸಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿರುವುದರಿಂದ ಸೋಂಕು ಹರಡುವಿಕೆ ಪ್ರಮಾಣ ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ನರ್ಸ್​ಗಳ ಜತೆ ಅಸಭ್ಯವಾಗಿ ವರ್ತಿಸಿದ್ದ ತಬ್ಲಿಘಿ ಜಮಾತ್​ನ 6 ಸದಸ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್​, ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 20 =
Remember me
