ಅಲ್ವಾರ್:ಬಿಸಿಲ ಧಗೆಯಿಂದ ಬಸವಳಿದ ಅರವತ್ತೈದು ಮಕ್ಕಳು ಕುಲ್ಫಿ ಸೇವಿಸಿ ಅಸ್ವಸ್ಥರಾಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ಒಡಿಶಾ ರೈಲು ದುರಂತದಿಂದ ಬಚಾವ್​ ಆಗಿದ್ದ ಚಿಕ್ಕಮಗಳೂರಿನ ಯಾತ್ರಿಕ ಹೃದಯಾಘಾತದಿಂದ ಸಾವುರಾಜ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಖುರ್ದ್ ಗ್ರಾಮದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರರಿಂದ ಕುಲ್ಫಿ ಸೇವಿಸಿದ ನಂತರ ಮಕ್ಕಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲತೊಡಗಿದರು. ಕೂಡಲೇ ಸ್ಥಳೀಯರು ಮಕ್ಕಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರು.
ಅಲ್ವಾರ್, ಬಂಡಿಕುಯಿ ಮತ್ತು ರಾಜ್‌ಗಢದ ಆಸ್ಪತ್ರೆಗಳಿಗೆ ಮಕ್ಕಳನ್ನು ದಾಖಲಿಸಲಾಗಿದ್ದು 50 ಮಕ್ಕಳಿಗೆ ಪ್ರಾಥಮಿಕಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿ ಕೊಡಲಾಯಿತು. ಉಳಿದ 15 ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡಿರುವುದರಿಂದ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ರಸ್ತೆ ಬದಿ ಮಾರಾಟಗಾರರಿಂದ ಕುಲ್ಫಿ ತಿಂದ ನಂತರ ಈ ಘಟನೆ ಸಂಭವಿಸಿದ್ದು, ಇದರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ವರದಿ ಬಂದ ಬಳಿಕ ಘಟನೆಯ ನಿಖರ ಕಾರಣ ಗೊತ್ತಾಗಲಿದೆ ಎಂದು ಅಲ್ವಾರ್​​ ಆಸ್ಪತ್ರೆಯ ವೈದ್ಯಾಧಿಕಾರಿ ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twenty =
Remember me
