ನವದೆಹಲಿ:ಕಳೆದ ವಾರದವರೆಗೂ ಅಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. ವೀಕೆಂಡ್​ನಲ್ಲಿ ಎರಡು ದಿನ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು.ಆದರೆ, ಅನ್​ಲಾಕ್​ 4 ಘೋಷಣೆಯಾಗುತ್ತಿದ್ದಂತೆ ಹರಿಯಾಣದಲ್ಲೂ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು. ಇದೀಗ ಮತ್ತೆ ಕರೊನಾ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಅದರಲ್ಲೂ ಒಂದೇ ಢಾಬಾದ 65 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹರಿಯಾಣದ ಮುರ್ಥಾಲ್​ ಎಂಬಲ್ಲಿನ ಪ್ರಸಿದ್ಧ ಸುಖದೇವ್​ ಢಾಬಾದ 65 ಸಿಬ್ಬಂದಿ ಕರೊನಾ ಪಾಸಿಟಿವ್​ ಆಗಿದ್ದಾರೆ. ಸೋಂಕಿಗೆ ಒಳಗಾದ ಯಾವ ಸಿಬ್ಬಂದಿಯಲ್ಲೂ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರನ್ನೂ ಹೋಮ್ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ;ಕರೊನಾ; ಭಾರತದಲ್ಲಿ ಪ್ರತಿದಿನ ಸೃಷ್ಟಿಯಾಗುತ್ತಿದೆ ಒಂದು ‘ಚೀನಾ’…!
ಮುನ್ನೆಚ್ಚರಿಕೆ ಕ್ರಮವಾಗಿ ಢಾಬಾವನ್ನು ಎರಡು ದಿನಗಳ ಕಾಲ ಮುಚ್ಚಲಾಗಿದೆ. ಸೋಂಕು ನಿವಾರಕವನ್ನು ಸಿಂಪಡಿಸಲಾಗಿದೆ. ಜತೆಗೆ, ಢಾಬಾದಲ್ಲಿ ಕೆಲಸ ಮಾಡುತ್ತಿರುವ ಇತರ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರ್ಥಾಲ್​ನ ಅಮ್ರಿಕ್​ ಸುಖ್​ದೇವ್​ ಢಾಬಾ ಅತಿ ದೊಡ್ಡ ಢಾಬಾಗಳಲ್ಲಿ ಒಂದಾಗಿದ್ದು, ಹರಿಯಾಣಾ- ದೆಹಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿದೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಊಟೋಪಚಾರದ ಕೇಂದ್ರಗಳಿವೆ. ಹೆದ್ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ಹೆಚ್ಚು ಸಂಖ್ಯೆಯಲ್ಲಿ ಆಕರ್ಷಿಸುತ್ತದೆ. ಅಧಿಕಾರಿಗಳಿಗೆ ಸಹಜವಾಗಿಯೇ ಆತಂಕ ಶುರುವಾಗಿದೆ.
ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
