ನವದೆಹಲಿ:ಭಾರತದಲ್ಲಿ ಕಳೆದ ಮೂರು ದಿನಗಳಲ್ಲಿ ಸುಮಾರು ಎರಡು ಲಕ್ಷ ಕರೊನಾ ಪ್ರಕರಣಗಳು ವರದಿಯಾಗಿವೆ. ಶನಿವಾರ 65 ಸಾವಿರ ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈವರೆಗೆ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಕಳೆದೊಂದು ವಾರದಿಂದಲೂ ಪ್ರತಿದಿನ 60 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದಾಗ್ಯೂ ಗುಣಮುಖರ ಪ್ರಮಾಣವೂ ಅಧಿಕವಾಗಿರುವುದು ಸಮಾಧಾನದ ಸಂಗತಿಯಾಗಿದೆ. ಸದ್ಯ ಗುಣಮುಖರ ಪ್ರಮಾಣ ಶೇಕಡ 68.78 ಇದೆ.
ಪ್ರತಿದಿನ 50 ಸಾವಿರಕ್ಕೂ ಅಧಿಕ ರೋಗಿಗಳು ಗುಣಮುಖ ರಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡು ಬಂದಿಲ್ಲ. ಸೋಂಕಿತರ ಮರಣ ಪ್ರಮಾಣವೂ ಇಳಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಒಂದೇ ದಿನ 7.19 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದು ಈವರೆಗೆ ನಡೆಸಲಾದ ಗರಿಷ್ಟ ಪ್ರಮಾಣದ ಪರೀಕ್ಷೆಗಳಾಗಿವೆ. ಈವರೆಗೆ ಒಟ್ಟು 2,41,06,535 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ದೇಶದಲ್ಲಿ ಕಳೆದ 24 ತಾಸಿನಲ್ಲಿ 22 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 21.74ಲಕ್ಷಕ್ಕೆ ಏರಿದೆ. ಹೊಸದಾಗಿ 251 ಸಾವು ಸಂಭವಿಸಿದ್ದು, ಮೃತರ ಸಂಖ್ಯೆ 43,700ಕ್ಕಿಂತ ಅಧಿಕವಾಗಿದೆ. ಕರೊನಾಗೆ ಅತೀ ಹೆಚ್ಚು ಬಾಧಿತವಾಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಸದ್ಯ ಪ್ರತಿದಿನ ಸರಾಸರಿ 10 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶದಲ್ಲೂ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಕರೊನಾದಿಂದಾಗಿ ಕಳೆದ ಎರಡು ತಿಂಗಳಿನಿಂದ ತೀವ್ರವಾಗಿ ತತ್ತರಿಸಿದ್ದ ದೆಹಲಿಯಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಸದ್ಯ ಪ್ರತಿದಿನ ಸರಾಸರಿ 1 ಸಾವಿರದಿಂದ 1,500 ಪ್ರಕರಣಗಳು ವರದಿಯಾಗುತ್ತಿವೆ.
ತಿವಾರಿ ಎಡವಟ್ಟು:ಗೃಹ ಸಚಿವ ಅಮಿತ್ ಷಾ ಆರೋಗ್ಯ ಸ್ಥಿತಿ ಬಗ್ಗೆ ದೆಹಲಿ ಬಿಜೆಪಿ ನಾಯಕ ಮನೊಜ್ ತಿವಾರಿ ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಷಾ ಅವರ ಕರೊನಾ ವರದಿ ನೆಗೆಟಿವ್ ಬಂದಿದೆ ಎಂದು ತಿವಾರಿ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಷಾ ಅವರಿಗೆ ಎರಡು ವಾರದ ಒಳಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ.
ಬಿಎಂಸಿಯಿಂದ ಧ್ವನಿ ಮಾದರಿ ಪರೀಕ್ಷೆ:ಕರೊನಾ ಪ್ರಕರಣಗಳ ಪತ್ತೆಗಾಗಿ ಮುಂದಿನ ವಾರದಿಂದ ಧ್ವನಿ ಮಾದರಿ ಪರೀಕ್ಷಾ ವಿಧಾನಗಳನ್ನು ಬಳಸಲು ಮಹರಾಷ್ಟ್ರದ ಬೃಹನ್ ಮುಂಬೈ ಮಹಾನಗರಪಾಲಿಕೆ ( ಬಿಎಂಸಿ) ನಿರ್ಧರಿಸಿದೆ. ಗೊರೆಗಾಂವ್​ನಲ್ಲಿರುವ ನೆಸ್ಕೊದಲ್ಲಿ ಎಐ ಆಧಾರಿತ ಧ್ವನಿ ಮಾದರಿ ಅಪ್ಲಿಕೇಶನ್ ಪರೀಕ್ಷಾ ವಿಧಾನವನ್ನು ಬಳಸಲಾಗುತ್ತದೆ ಎಂದು ಬಿಎಂಸಿ ಆಯುಕ್ತ ಸುರೇಶ್ ಕಾಕಾನಿ ಹೇಳಿದ್ದಾರೆ. ಫ್ರಾನ್ಸ್ ಮತ್ತು ಇಟಲಿಯಲ್ಲಿ ಸೋಂಕಿತರ ಪತ್ತೆಗಾಗಿ ಧ್ವನಿ ವಿಶ್ಲೇಷಣೆಯನ್ನು ಬಳಸಲಾಗಿದೆ. ಮೊದಲಿಗೆ ಸೋಂಕಿತರು ಮತ್ತು ಶಂಕಿತ 1 ಸಾವಿರ ಜನರ ಮೇಲೆ ನಡೆಸಲಾಗುವ ಈ ಪರೀಕ್ಷೆ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಇತರ ಕಡೆಗಳಲ್ಲೂ ಬಳಸಲು ಬಿಎಂಸಿ ನಿರ್ಧರಿಸಿದೆ. ಧ್ವನಿ ಮಾದರಿ ವಿಶ್ಲೇಷಣೆಯ ಫಲಿತಾಂಶ 30 ನಿಮಿಷಗಳಲ್ಲಿ ದೊರೆಯುತ್ತದೆ.
ಆರೈಕೆ ಕೇಂದ್ರದಲ್ಲಿ ಅಗ್ನಿ ಅವಘಢ:ವಿಜಯವಾಡದಲ್ಲಿ ಕರೊನಾ ಆರೈಕೆ ಕೇಂದ್ರವಾಗಿ ಮಾರ್ಪಡಿಸಿರುವ ಹೋಟೆಲ್​ವೊಂದರಲ್ಲಿ ಭಾನುವಾರ ಮುಂಜಾನೆ 5 ಗಂಟೆಗೆ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಎರಡು ವಾರಗಳಿಂದ ಇಲ್ಲಿ ಸುಮಾರು 50 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ವೇಳೆ ರೋಗಿಗಳ ಜತೆ 10 ಅರೆವೈದ್ಯಕೀಯ ಸಿಬ್ಬಂದಿ ಇದ್ದರು. ಹೊಗೆಯಿಂದ ಉಸಿರುಗಟ್ಟಿ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕಿಟಕಿ ಹಾಗೂ ಬಾಗಿಲುಗಳನ್ನು ಒಡೆದು ರೋಗಿಗಳು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.
ಜಮ್ಮು- ಕಾಶ್ಮೀರ ವೈದ್ಯ ಸಾವು:ಜಮ್ಮು-ಕಾಶ್ಮೀರದ ವೈದ್ಯ ಮೊಹಮ್ಮದ್ ಅಶ್ರಫ್ ಮಿರ್ ಎಂಬುವವರು ಸೋಂಕಿನಿಂದಾಗಿ ಭಾನುವಾರ ಸಾವನ್ನಪ್ಪಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಮಿರ್, ತಮಗೆ ಕರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ]ೕನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ ಅವರ ಆರೋಗ್ಯ ಸ್ಥಿತಿಯಲ್ಲಿ ತೀವ್ರ ಏರುಪೇರಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿಂದು 5,985 ಜನರಿಗೆ ಸೋಂಕು; ಶತಕ ದಾಟಿದ ಸಾವಿನ ಸಂಖ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
