ಕೊವಿಡ್​-19 ಶುರುವಾದಾಗಿನಿಂದ ಕಾಯಿಲೆಯಿಂದ ಮೃತಪಟ್ಟವರು ಒಂದಷ್ಟು ಮಂದಿಯಾದರೆ, ಖಿನ್ನತೆ ಮತ್ತಿತರ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯೂ ದೊಡ್ಡದಾಗಿದೆ
ಇದೀಗ ಕೇರಳದಿಂದ ಹೊರಬಿದ್ದ ವರದಿಯೊಂದು ನಿಜಕ್ಕೂ ಆತಂಕ ಮೂಡಿಸುವಂತಿದೆ. ಕರೊನಾ ವೈರಸ್​ ಲಾಕ್​ಡೌನ್​ ಶುರುವಾದ ಮಾರ್ಚ್​ 25ರಿಂದ ಇಲ್ಲಿಯವರೆಗೆ ಕೇರಳದಲ್ಲಿ ಸುಮಾರು 66 ಅಪ್ರಾಪ್ತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.ಇವರೆಲ್ಲರೂ 18ವರ್ಷ ಒಳಗಿನವರೇ ಆಗಿದ್ದಾರೆ ಎಂದು ಹೇಳಲಾಗಿದೆ. ಕೇರಳ ಸರ್ಕಾರ ಹಿರಿಯ ಐಪಿಎಸ್​ ಅಧಿಕಾರಿ ಆರ್​. ಶ್ರೀಕಲಾ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದ್ದು, ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ನಡೆದ ಬಗ್ಗೆ ಕೂಲಂಕಷವಾಗಿ ಅಧ್ಯಯನ ಮಾಡಲು ಸೂಚಿಸಿದೆ. ಅಲ್ಲದೆ, ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆಯೂ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಹೇಳಿದೆ.ಇದನ್ನೂ ಓದಿ:ಕ್ರಿಮಿನಲ್​ ವಿಕಾಸ್​ ದುಬೆಯ ಪತ್ನಿ, ಮಗನೂ ಅರೆಸ್ಟ್​…
ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಕರೊನಾ ನಿಯಂತ್ರಣವನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಇಂದು ಒಂದೇ ದಿನ 339 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಕರೊನಾ ಪ್ರಕರಣಗಳ ಸಂಖ್ಯೆ 6534ಕ್ಕೆ ಏರಿದೆ. (ಏಜೆನ್ಸೀಸ್​)
ಉತ್ತರ ಪ್ರದೇಶದಲ್ಲಿ ಮೂರು ದಿನ ಲಾಕ್​ಡೌನ್​; ನಿಯಮಗಳನ್ನು ಮೀರೋ ಹಾಗಿಲ್ಲ ಎಂದ ಯೋಗಿ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 4 =
Remember me
