ತಿರುವನಂತಪುರಂ:ಕೇರಳದಲ್ಲಿ ಕರೊನಾ ವೈರಸ್​ಗೆ ಎರಡನೇ ಬಲಿಯಾಗಿದೆ. ದುಬೈನಿಂದ ಮರಳಿದ್ದ ಎರ್ನಾಕುಲಂನ 69 ವರ್ಷದ ವೃದ್ಧನೋರ್ವ ಮೊನ್ನೆ ಕರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಇಂದು ಬೆಳಗ್ಗೆ 68 ವರ್ಷದ ವೃದ್ಧ ಮೃತಪಟ್ಟಿದ್ದಾರೆ.ಕರೊನಾ ಸೋಂಕಿತರಾದ ಈ 68ವರ್ಷದ ವೃದ್ಧನಿಗೆ ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ ವೈಫಲ್ಯವಾಗಿ ಮೃತಪಟ್ಟಿದ್ದಾರೆಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಆದರೆ ಈ 68 ವರ್ಷದ ವೃದ್ಧ ವಿದೇಶ ಪ್ರಯಾಣ ಮಾಡಿರಲಿಲ್ಲ. ಕೆಲವು ಮದುವೆಗಳಲ್ಲಿ ಪಾಲ್ಗೊಂಡಿದ್ದರು. ಇವರಿಗೆ ಬಿಪಿ ಮತ್ತು ಥೈರಾಯ್ಡ್​ ಇತ್ತು. ಕಳೆದ ಐದು ದಿನಗಳಿಂದಲೂ ವೆಂಟಿಲೇಟರ್​ ಸಹಾಯದಿಂದಲೇ ಬದುಕಿದ್ದರು. ಕಿಡ್ನಿ ವೈಫಲ್ಯಕ್ಕೀಡಾಗಿದ್ದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
ಕೇರಳದಲ್ಲಿ ಸೋಮವಾರ ಹೊಸದಾಗಿ 32 ಕರೊನಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಕಾಸರಗೋಡು ಜಿಲ್ಲೆಯೊಂದರಲ್ಲೇ 17 ಕರೊನಾ ಪ್ರಕರಣ ಬೆಳಕಿಗೆ ಬಂದಿದೆ. ಕಣ್ಣೂರಲ್ಲಿ 15, ವಯಾನಾಡು ಮತ್ತು ಇಡುಕ್ಕಿಯಲ್ಲಿ ತಲಾ ಎರಡು ಮಂದಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
