ವಾರಣಾಸಿ:ಉದ್ಯಮಿಯೊಬ್ಬರಿಗೆ ಸಂಬಂಧಿಸಿದ 1.4 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಏಳು ಪೊಲೀಸರನ್ನು ವಜಾಗೊಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಭೇಲುಪುರ್ ಪೊಲೀಸ್​ ಠಾಣಾ ವ್ಯಾಪ್ತಿಯ ಔರೈಯಾ ಜಿಲ್ಲೆಯಲ್ಲಿ ಗುಜರಾತ್​ನ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಇನ್ನೂ ಮುಂದುವರೆದಿದ್ದು, ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.
ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನು ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್‌ಪೆಕ್ಟರ್‌ ಹಾಗೂ ಕಾನ್‌ಸ್ಟೆಬಲ್‌ಗಳಾಗಿದ್ದಾರೆ.
ಈ ಕುರಿತು ಮಾತನಾಡಿದ ವಾರಣಾಸಿಯ ಪೊಲೀಸ್​ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ಸಮಯದಲ್ಲಿ ಅವರು ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿರುವುದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್​ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಈ ಕುರಿತು ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eleven =
Remember me
