ಪ್ರಯಾಗ್​ರಾಜ್:ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ಹಳ್ಳಿಯೊಂದರಲ್ಲಿ ಅಕ್ರಮ ಮದ್ಯ ಸೇವಿಸಿದ ಏಳು ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 15 ಜನ ತೀವ್ರ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಮಿಲಿಯಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಂಗಡಿಯೊಂದರಿಂದ ಖರೀದಿಸಿದ ನಕಲಿ ಮದ್ಯ ಸೇವಿಸಿದ ಜನರಲ್ಲಿ ಹಲವರು ಅಸ್ವಸ್ಥಗೊಂಡರು. ಕೂಡಲೇ ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಏಳು ಜನ ಪ್ರಾಣ ಕಳೆದುಕೊಂಡರು. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದ್ಯದಂಗಡಿ ನಡೆಸುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ಮದ್ಯದ ಸ್ಯಾಂಪಲ್​ನ ಪರೀಕ್ಷೆ ನಂತರವೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಪ್ರಯಾಗ್​ರಾಜ್ ಜಿಲ್ಲಾಧಿಕಾರಿ ಭಾನು ಚಂದ್ರ ಗೋಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ :ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ 78 ಹಸುಗಳ ನಿಗೂಢ ಸಾವು!
ಕಳ್ಳಬಟ್ಟಿ ದುರಂತ ತಿಳಿಯುತ್ತಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಮದ್ಯದಂಗಡಿ ಮಾಲೀಕರು ಅಕ್ರಮ ಮದ್ಯ ಮಾರುತ್ತಿರುವ ಬಗ್ಗೆ ಹಲವು ಬಾರಿ ದೂರಲಾಗಿದೆ. ಆದಾಗ್ಯೂ ಅವರ ವಿರುದ್ಧ ಕ್ರಮಕೈಗೊಂಡಿಲ್ಲ. ಈ ಪ್ರದೇಶದಲ್ಲಿ ಆ ದಂಪತಿ ಮೂರು ಅಂಗಡಿ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)
ನಗ್ರೋಟಾ ಉಗ್ರರ ಉಸ್ತುವಾರಿ ನೋಡ್ಕೊಳ್ತಿದ್ದುದು ಜೆಇಎಂ ಮುಖ್ಯಸ್ಥ ಮಸೂದ್ ಅಜರ್​ನ ಸಹೋದರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + eight =
Remember me
