ನಾಗುರ್​:ಭೀಕರ ಅಪಘಾತವೊಂದರಲ್ಲಿ ಆರು ಜನ ಮೃತಪಟ್ಟು, 13 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗುರ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು ಮತ್ತು ಎರಡೂ ವಾಹನಗಳ ಚಾಲಕರು ಸೇರಿದ್ದಾರೆ.
ಇದನ್ನೂ ಓದಿ:ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಶಿವಣ್ಣ ಬೇಸರ: ಸಮಾಧಾನಿಸಲು ಭೇಟಿ ನೀಡಿದರೇ ಸುರ್ಜೆವಾಲಾ?
ಇಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಪುಣೆಯ ಮೆಹೆಕರ್‌ನಿಂದ ಬರುತ್ತಿದ್ದ ಬಸ್​ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ತೀವ್ರ ಹಾನಿಯಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ವಾಹನಗಳ ಜಖಂಗೊಂಡ ಅವಶೇಷಗಳ ಮೂಲಕ ಬದುಕುಳಿದವರನ್ನು ಹೊರತೆಗೆಯಲಾಗುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಿಂಧಖೇಡರಾಜ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 19 =
Remember me
