ಗುವಾಹಟಿ:ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯ ಜಲುಕ್​ಬರಿ ಪ್ರದೇಶದಲ್ಲಿ ನಡೆದಿದೆ.
ಅರಿಂದಮ್, ನಿಯೋರ್ ದೇಕಾ, ಕೌಶಿಕ್ ಮೋಹನ್, ಉಪಂಗ್ಶು ಶರ್ಮಾ, ರಾಜ್ ಕಿರಣ್ ಭುಯಾನ್, ಎಮನ್ ಹಾಗೂ ಕೌಶಿಕ್ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.
ಇದನ್ನೂ ಓದಿ:ಇಬ್ಬರನ್ನು ಬಿಟ್ಟರೆ ಲಿಂಗಾಯತ ಸಚಿವರಿಗೆ ಸಿಗದ ಪ್ರಬಲ ಖಾತೆಗಳು!
ಭಾನುವಾರ ತಡರಾತ್ರಿ ಜಲುಕ್ಬರಿ ಪ್ರದೇಶದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಜಲುಕ್‌ಬರಿ ಫ್ಲೈಓವರ್ ರಸ್ತೆಯಲ್ಲಿ ನಿಂತಿದ್ದ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆ ಕುರಿತು ಮಾತನಾಡಿದ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್, ಭಾನುವಾರ ತಡರಾತ್ರಿ ಜಲುಕ್ಬರಿ ಪ್ರದೇಶದಲ್ಲಿ ನಡೆದ ಸಂಭವಿಸಿದ ಅಪಘಾತದಲ್ಲಿ ಮೃತರು ವಿದ್ಯಾರ್ಥಿಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
