ಭೋಪಾಲ್​:ಅಕ್ರಮ ಪಟಾಕಿ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟು, ನೂರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡು, 50ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ.
ಸ್ಫೋಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, 30-35 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಗ್ನಿಶಾಮಕ ಇಲಾಖೆಯವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
दुखद खबर 🚨हरदा में बड़ी घटना…पटाखा फैक्ट्री में#Blastके बाद तेज धमाकाआस पास के इलाक़े में भूकंप जैसे झटके महसूस हुए।आग बुझाने का प्रयास जारी।#MadhyaPradesh#Harda#Blastpic.twitter.com/hG1dwi03cc
ಇದನ್ನೂ ಓದಿ:ಟೆಸ್ಟ್​ ಪಂದ್ಯದ ಕಾಮೆಂಟರಿ ವೇಳೆ ದಿಢೀರ್​ ಹೊರನಡೆದ ಸುನೀಲ್​ ಗಾವಸ್ಕರ್​; ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್​, ಹರ್ದಾ ಜಿಲ್ಲೆಯ ಮಗರ್ಧ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, ಪಟಾಕಿಗಾಗಿ ಸಂಗ್ರಹಿಸಿಟ್ಟಿದ್ದ ಗನ್‌ಪೌಡರ್‌ಗೆ ಬೆಂಕಿ ತಗುಲಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, 30-35 ಜನರ ಸ್ಥಿತಿ ಚಿಂತಾಜನಕವಾಗಿದೆ.
ಭೋಪಾಲ್​ನಿಂದ್​ ವೈದ್ಯರ ತಂಡ ಆಗಮಿಸುತ್ತಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಖಾನೆಯನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಪ್ರಾಥಮಿಕ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್​ ತಿಳಿಸಿದ್ದಾರೆ.
#WATCH| Madhya Pradesh: People injured in the massive fire that broke out in a firecracker factory in Harda, are being shifted to a hospital for treatment. Fire tenders have reached the spot, several people are feared trapped.pic.twitter.com/rwEzdIUUJX
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
