ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಕಲಿ ಡ್ರಗ್ಸ್ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ. ನಕಲಿ ಕ್ಯಾನ್ಸರ್ ಔಷಧಗಳನ್ನು ತಯಾರಿಸಿ ಸರಬರಾಜು ಮಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಅಹಮ್ಮದ್​ನಗರವನ್ನು ಅಹಲ್ಯಾ ನಗರ ಎಂದು ಮರು ನಾಮಕರಣದ ಮಹಾರಾಷ್ಟ್ರ ಸರ್ಕಾರ!
ಇಬ್ಬರು ಆರೋಪಿಗಳನ್ನು ದೆಹಲಿಯ ಪ್ರಮುಖ ಆಸ್ಪತ್ರೆಯ ಉದ್ಯೋಗಿಗಳು ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ತಂಡದಿಂದ ಒಟ್ಟು ಒಂಬತ್ತು ಕ್ಯಾನ್ಸರ್ ಔಷಧಿಗಳು, 4 ಕೋಟಿ ರೂಪಾಯಿ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.
ನಕಲಿ ಕ್ಯಾನ್ಸರ್ ಔಷಧಿಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿರುವ ದಂಧೆಯ ಬಗ್ಗೆ ಅಪರಾಧ ವಿಭಾಗಕ್ಕೆ ಮಾಹಿತಿ ಬಂದ ನಂತರ ಈ ಸಂಬಂಧ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಬಳಿಕ ಆರೋಪಿಗಳ ಪತ್ತೆಗೆ ತಂಡ ರಚಿಸಿಸಲಾಗಿತ್ತು.
ಈ ತಂಡ ಬರೋಬ್ಬರಿ 100 ಮೌಲ್ಯದ ಆ್ಯಂಟಿ ಫಂಗಲ್ ಔಷಧಿಯನ್ನು ಖಾಲಿ ಬಾಟಲಿಗಳಲ್ಲಿ ತುಂಬಿ ‘ಜೀವರಕ್ಷಕ’ ಕ್ಯಾನ್ಸರ್ ಔಷಧಿ ಎಂದು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಚೀನಾ, ಅಮೆರಿಕದಂತಹ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.
ಈ ನಕಲಿ ಔಷಧಗಳನ್ನು ಗುರುಗ್ರಾಮ್‌ನ ಎರಡು ಪ್ಲಾಟ್‌ಗಳಲ್ಲಿ ತಯಾರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಹೀಟ್ ಗನ್, ಹೆಚ್ಚಿನ ಸಂಖ್ಯೆಯ ಖಾಲಿ ಪೈಲ್‌ಗಳು, 800 ಕ್ಕೂ ಹೆಚ್ಚು ಪ್ಯಾಕೇಜ್ ಬಾಕ್ಸ್‌ಗಳು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ವಿಪಿಲ್ ಜೈನ್ ಈ ಗ್ಯಾಂಗ್ ನ ಪ್ರಮುಖ ಸೂತ್ರಧಾರ. ನೀರಜ್ ಚೌಹಾಣ್ ಮತ್ತು ಇತರ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಗಳಿಂದ ಖಾಲಿ ಬಾಟಲಿಗಳನ್ನು ತಂದು ಈ ನಕಲಿ ಔಷಧ ತುಂಬಿಸಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇನ್ನು ಪೇಟಿಎಂ ಫಾಸ್​ಟ್ಯಾಗ್ ಸ್ಥಗಿತ! ಮುಂದೆ ಏನು ಮಾಡಬೇಕು, ಇಲ್ಲಿದೆ ನೋಡಿ ಮಾಹಿತಿ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 16 =
Remember me
