ಸೂರತ್:ಶನಿವಾರ ಸೂರತ್​ನ ಸಚಿನ್ ಪಾಲಿ​ ಗ್ರಾಮದಲ್ಲಿ ಆರು ಅಂತಸ್ಥಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಪಡೆಗಳು ಅವಶೇಷಗಳ ಅಡಿಯಿಂದ ಏಳು ಮೃತದೇಹಗಳನ್ನು ಹೊರತೆಗೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ SDRFನ ಹಿರಿಯ ಅಧಿಕಾರಿಯೊಬ್ಬರು, ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುತ್ತೇವೆ.
ನಮಗೆ ತಿಳಿದು ಬಂದಿರುವ ಮಾಹಿತಿ ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದ್ದು, ಕಟ್ಟಡ ಕುಸಿಯಲು ಏನು ಕಾರಣ ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಲಾಗಿದೆ. ಈ ಪ್ರದೇಶದಲ್ಲಿ ಫ್ಯಾಕ್ಟರಿ ನೌಕರರು ಹೆಚ್ಚಾಗಿ ವಾಸಿಸುತ್ತಿದ್ದು, ಉಳಿದ ಕಟ್ಟಡಗಳ ಗುಣಮಟ್ಟದ ಬಗ್ಗೆಯೂ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು SDRFನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
