ರಾಜಸ್ಥಾನ:ನಿನ್ನೆ ತಡರಾತ್ರಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ನೌರಂಗದೇಸರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ರಾಜಸ್ಥಾನದ ನೌರಂಗದೇಸರ್ ಜಿಲ್ಲೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು. ಒಂದು ವಾಹನವು ಇನ್ನೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಹೆಚ್ಚು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
STORY | Seven members of a family were killed while two others were injured in a head-on collision between a car and a truck in Rajasthan's Hanumangarh district, police said on Sunday. The accident occurred on Saturday night when the family was returning home from a function.…pic.twitter.com/i2viPcWMXf
— Press Trust of India (@PTI_News)October 29, 2023

ಶನಿವಾರ ರಾತ್ರಿ ಕುಟುಂಬ ಸಮೇತರಾಗಿ ಕಾರ್ಯಕ್ರಮ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಪರಮ್‌ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‌ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ಎಂದು ಗುರುತಿಸಲಾಗಿದ್ದು, ಅವರನ್ನು ಬಿಕಾನೇರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
हनुमानगढ़ जिले में कार और ट्रोले की टक्कर से हुए भीषण सड़क हादसे के कारण हुई जनहानि अत्यंत दु:खद खबर है ! परमात्मा दिवंगत जनों की आत्मा को शांति प्रदान करें व घायलों को शीघ्र स्वास्थ्य लाभ प्रदान करें !
— HANUMAN BENIWAL (@hanumanbeniwal)October 28, 2023

ಹನುಮಾನ್‌ಗಢ ಟೌನ್ ಪೊಲೀಸ್ ಠಾಣಾಧಿಕಾರಿ ವೇದಪಾಲ್ ಶಿವರಾನ್ ಮಾತನಾಡಿ, ನೊರಂಗ್‌ದೇಸರ್‌ ಗ್ರಾಮದ ಬಳಿ ಓವರ್‌ಟೇಕ್ ಮಾಡುವಾಗ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಡಿಕ್ಕಿಯ ರಭಸಕ್ಕೆ ಕಾರು ಹಾರಿಹೋಗಿದ್ದು, ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬಿಕಾನೇರ್‌ಗೆ ಕಳುಹಿಸಲಾಗಿದೆ. ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಆಡಳಿತಾಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಟ್ರಕ್ ಚಾಲಕನನ್ನು ಹಿಡಿಯಲು ಪ್ರಯತ್ನಗಳನ್ನು ಆರಂಭಿಸಿದರು.
ನಾಗೌರ್​​ ಸಂಸದ ಹನುಮಾನ್​​ ಬೇನಿವಾಲ್​​ ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದವರ ಆತ್ಮಕ ಶಾಂತಿ ಸಿಗಲಿ, ಗಾಯಾಳುಗಳಿಗೆ ಶೀಫ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್​ ಮಾಡಿದ್ದಾರೆ.
ಸರಣಿ ಸ್ಫೋಟ; ಓರ್ವ ಸಾವು, 20 ಮಂದಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
