ಒಡಿಶಾ:ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಮಿನಿ ಟ್ರಕ್​ ಡಿಕ್ಕಿಯಾಗಿ ಏಳು ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಒಡಿಶಾದ ಜಾಜ್‌ಪುರದಲ್ಲಿ ನಡೆದಿದೆ.
ಕೋಲ್ಕತ್ತಾ ಕಡೆಯಿಂದ ಏಳು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್​​ ನ್ಯೂಲ್ಪರ್​ ಪ್ರದೇಶದ ಸೇಂಟ್ರಲ್​​ ಬ್ಯಾಂಕ್​​ ಬಳಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ಟ್ರಕ್​​ ಕೆಟ್ಟು ನಿಂತಿತ್ತು ಎಂದು ವರದಿಯಾಗಿದೆ. ಡಿಕ್ಕಿ ಸಂಭವಿಸಿದ ಬಳಿಕ ಮಿನಿ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಲ್ಲೇ ರಸ್ತೆ ಮೇಲೆ ನಿಂತಿದ್ದ ಬಾಲಕ ಮತ್ತು ಕ್ಲಿನರ್​ ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಭೀಕರ ಅಪಘಾತದ ವೇಳೆ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದರು ಮತ್ತು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲ್ಪಟ್ಟ ಇನ್ನೊಬ್ಬರು ಸಹ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:7.9 ಲಕ್ಷ ರೂ. ಖರ್ಚು ಮಾಡಿ ವಿಶ್ವದಲ್ಲೇ ಅತಿ ದೊಡ್ಡ ತುಟಿ ಪಡೆದ ಯುವತಿ!
ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಶಾಲಾ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ‘ನಾವು ಶವಗಳ ಗುರುತು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರೆಲ್ಲರೂ ಕೋಲ್ಕತ್ತಾ ಮತ್ತು ಅದರ ಅಮೀಪದ ಪ್ರದೇಶಗಳಿಗೆ ಸೇರಿದವರು ಎಂದು ವರದಿಯಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಮಾರ್ಕ್ಸ್ ಕಾರ್ಡ್ ನೀಡಲು ವಿಳಂಬ ಮಾಡಿದ ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ವಿದ್ಯಾರ್ಥಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + six =
Remember me
