ಬೆತಿಯಾ:ವೇಗವಾಗಿ ಬಂದ ಬೊಲೆರೋವೊಂದು ಸೈಕಲ್​ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ:ಸೋಶಿಯಲ್​​ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ
ಘಟನೆಯಲ್ಲಿ ಏಳು ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ದೃಶ್ಯದಲ್ಲೇನಿದೆ?10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್​​ ಕ್ಲಾಸ್​ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದನು. ಈ ವೇಳೆ ಹಿಂದಿನಿಂದ ಬಂದ್​ ಬೊಲೆರೋ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.
ಆಗ ಓರ್ವ ವಿದ್ಯಾರ್ಥಿನಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದನ್ನು ನೋಡಿದ ಡ್ರೈವರ್​, ಅಪಘಾತ ಸ್ಥಳದಿಂದ ಸುಮಾರು 20 ಅಡಿಗಳಷ್ಟು ಆಕೆಯನ್ನು ಎಳೆದೊಯ್ದಿದ್ದಾನೆ. ಅಪಘಾತದ ನಂತರ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
