ಉತ್ತರಪ್ರದೇಶ:ಮದುವೆ ಮನೆ, ದೇವಸ್ಥಾನ ಹಾಗೂ ಹಬ್ಬದ ಮನೆಯ ಊಟ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಒಂದು ತುತ್ತು ಊಟ ಹೆಚ್ಚಾಗಿಯೇ ಸೇರುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ಆದರೆ ಹೀಗೆ ಮದುವೆ ಮನೆಯ ಊಟನ್ನು ಆಸೆಯಿಂದ ಸವಿದು ಬರೋಬ್ಬರಿ 70 ಮಂದಿ ಆಸ್ಪತ್ರೆ ದಾಖಲಾಗಿದ್ದಾರೆ.
ಉತ್ತರಪ್ರದೇಶದ ಕನೌಜ್​​ನ ಹಳ್ಳಿಯೊಂದರಲ್ಲಿ ಮದುವೆಯ ಔತಣಕೂಟವೊಂದರಲ್ಲಿ ಆಹಾರ ಸೇವಿಸಿದ ನಂತರ ಮಕ್ಕಳು ಸೇರಿದಂತೆ ಸುಮಾರು 70 ಜನರು ಅಶ್ವಸ್ಥರಾಗಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬಜರಂಗದಳ ಬ್ಯಾನ್ ಮಾಡ್ತಾರಾ? ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತಾರಾ? ಪರಂ ಹೇಳೋದೇನು?
ಮದುವೆ ಮನೆಯ ಆಹಾರವನ್ನು ಸೇವಿಸಿದ ಸುಮಾರು 200 ಜನರಲ್ಲಿ, ಸುಮಾರು 70 ಜನರು ರಸಗುಲ್ಲಾ ತಿಂದ ನಂತರ ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ. ಔತಣಕ್ಕೆ ಬಂದಿದ್ದ ಬಹುತೇಕ ಎಲ್ಲರೂ ರಸಗುಲ್ಲಾ ತಿಂದಿದ್ದು, ಹಲವರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮದ ನಿವಾಸಿ ಮುನ್ನಾ ಹೇಳಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಶಕ್ತಿ ಬಸು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿರುವ ಎಲ್ಲ ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿಯಿಂದ ಜೀವ ಬೆದರಿಕೆ ಇದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + thirteen =
Remember me
