ಕೊಚ್ಚಿ:ನೆನಪಿನಶಕ್ತಿ ಕಳೆದುಕೊಂಡು ಮೂಲೆ ಹಿಡಿದಿರುವ 75 ವರ್ಷದ ವೃದ್ಧೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಕೇರಳದ ಕೋಲೆಂಚೆರಿ ಸಮೀಪದ ಪ್ಯಾಂಗೋಡ್​ ಎಂಬ ಗ್ರಾಮದಲ್ಲಿ ಪರಿಚಿತರ ಮನೆಗೆ ಬಂದಿದ್ದಾಗ ವೃದ್ಧೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿದೆ. ಆಕೆಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು ಕೂಡ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಗಂಡನಿಗೆ ಗೊತ್ತಾಗದಂತೆ ಬಂದು ಹೋಗ್ತಾ ಇರು ಎಂದು ಬ್ಲ್ಯಾಕ್​ಮೇಲ್ ಮಾಡಿದಾತನ ವಿರುದ್ಧ ದೂರು ದಾಖಲು
ಎರಡು ಮಕ್ಕಳು ಮತ್ತು ಮೊಮ್ಮಕ್ಕಳನ್ನು ಹೊಂದಿರುವ ಈ ವೃದ್ಧೆ ಭಾನುವಾರ ತನ್ನ ಗ್ರಾಮದಲ್ಲಿರುವ ಪರಿಚಿತರ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವೃದ್ಧೆಗೆ ನೆನಪಿನ ಶಕ್ತಿ ಕ್ಷೀಣಿಸಿದೆ. ತನ್ನ ಮೇಲೆ ಅತ್ಯಾಚಾರ ಎಸಗಿದವನ ಬಗ್ಗೆ ಕ್ಷಣಕ್ಕೊಂದು ಮಾಹಿತಿ ಕೊಡುತ್ತಿದ್ದಾರೆ. ಹಾಗಾಗಿ, ನಿಜವಾದ ಆರೋಪಿಯನ್ನು ಬಂಧಿಸಲು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಭೂಅಸ್ತ್ರ ಬಿಟ್ಟ ಎಂಟಿಬಿ ನಾಗರಾಜ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
