ಥಾಣೆ:ಮುಂಬಯಿ ಸಮೀಪದ ಭಿವಾಂಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಕನಿಷ್ಠ 10 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ 20 ಜನ ಅಲ್ಲಿ ಸಿಲುಕಿರುವ ಸಾಧ್ಯತೆ ಇದೆ.
ಭಿವಾಂಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಹನ್ನೊಂದು ಜನರನ್ನು ರಕ್ಷಿಸಲಾಗಿದೆ ಎಂದು ಥಾಣೆ ನಗರಪಾಲಿಕೆಯ ಪಿಆರ್​ಒ ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಟ್ಟಡದ ಅವಶೇಷಗಳ ನಡುವೆ ಸಿಲುಕಿದ್ದ ಮಗು ಒಂದನ್ನು ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್ (ಎನ್​ಡಿಆರ್ ಎಫ್) ತಂಡ ರಕ್ಷಣೆ ಮಾಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:‘ಕಸ್ತೂರಿ ನಿವಾಸ’ ಕೈಬಿಟ್ಟ ರಚಿತಾ ರಾಮ್
ಪ್ರಾಥಮಿಕ ಮಾಹಿತಿ ಪ್ರಕಾರ, ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿರುವ ಕಟ್ಟಡ ಕುಸಿದ ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಕನಿಷ್ಠ 20 ಜನರನ್ನು ರಕ್ಷಿಸಿದ್ದಾರೆ. ಇನ್ನಷ್ಟು ಮಾಹಿತಿ ಬರಬೇಕಷ್ಟೆ. (ಏಜೆನ್ಸೀಸ್)
#UPDATEFive people have lost their lives in the Bhiwandi building collapse incident: Thane Municipal Corporation PRO#Maharashtrahttps://t.co/jrpBvvtoCIpic.twitter.com/yRpkUiFZZd
— ANI (@ANI)September 21, 2020

ಚೀನಾ-ಅರುಣಾಚಲ ಪ್ರದೇಶದ ಗಡಿ ವಿಂಗಡಿಸುವುದು ಎಲ್​ಎಸಿ ಅಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 6 =
Remember me
