ಮುಂಬೈ:ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ 8 ಮಂದಿ ಸಾವಿಗೀಡಾಗಿ, ಅನೇಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯಲ್ಲಿನ ಬೋಯಿಸರ್​ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ.
ರಾಸಾಯನಿಕ ಕಾರ್ಖಾನೆಯು ಕೊಲ್ವಾಡೆ ಗ್ರಾಮದಲ್ಲಿದೆ. ನಿನ್ನೆ ರಾತ್ರಿ ಸುಮಾರು 7.20ರ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ಸದ್ದು ಸುಮಾರು 15 ಕಿ.ಮೀ ವರೆಗೂ ಕೇಳಿದೆ ಎಂದು ಪೊಲೀಸ್​ ವಕ್ತಾರ ಹೇಮಂತ್​ ಕಟ್ಕರ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾಕಷ್ಟು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾಗಿ ಪಲ್ಘಾರ್​ ಪೊಲೀಸ್​ ವರಿಷ್ಠಾಧಿಕಾರಿ ಗೌರವ್​ ಸಿಂಗ್​ ಕೂಡ ಖಚಿತಪಡಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಕಾರ್ಯಾಚರಣೆಗೆ ಸಾಥ್​ ನೀಡಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
