ವಯನಾಡ್​​:ಚಾಲಕನ ನಿಯಂತ್ರಣ ತಪ್ಪಿ ಜೀಪ್​ ಕಮರಿಗೆ ಉರುಳಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಕೇರಳದ ವಯನಾಡ್​ ಜಿಲ್ಲೆಯಲ್ಲಿ ನಡೆದಿದೆ.
ವಯನಾಡಿನ ವಾಲಾಡ್​-ಮನಂತವಾಡಿ ರಸ್ತೆಯಲ್ಲಿ ಮಧ್ಯಾಹ್ನ 3:30ರ ಸುಮಾರಿಗೆ ದುರಂತ ಸಂಭವಿಸಿದ್ದು, ಜೀಪಿನಲ್ಲಿ 12ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮೃತಪಟ್ಟವರ ಪೈಕಿ ಹೆಚ್ಚಿನವರು ಮಹಿಳೆಯರಿದ್ದರು ಎಂದು ತಿಳಿದು ಬಂದಿದೆ. ಮೃತ ಮಹಿಳೆಯರು ಮಕ್ಕಿಮಾಳದಲ್ಲಿರುವ ಖಾಸಗಿ ಟೀ ಎಸ್ಟೇಟ್​ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್​ ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಘಟನೆ ಕುರಿತಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 5 =
Remember me
