ನವದೆಹಲಿ:ಭಾರತದಲ್ಲಿ ಚೀತಾಗಳ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ನಮೀಬಿಯಾ ದೇಶದಿಂದ ಚೀತಾಗಳನ್ನು ಕರೆತರಲಾಗುತ್ತಿದೆ. ಸೆ. 17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ಈ ಚೀತಾಗಳನ್ನು ವಿನಿಮಯ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಭಾರತದಲ್ಲಿ ಚೀತಾಗಳ ಸಂಖ್ಯೆ ಹೆಚ್ಚಳವಾಗಬೇಕೆಂಬ ಕೂಗು ಕೇಳಿ ಬರುತ್ತಲೇ ಇತ್ತು. ಇದಕ್ಕಾಗಿ ನಮೀಬಿಯಾ ದೇಶದಿಂದ ಚೀತಾಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಲಾಗಿತ್ತು. ಈ ಪ್ರಯತ್ನದ ಫಲವಾಗಿ ಇದೀಗ ಭಾರತಕ್ಕೆ ಮೊದಲ ಹಂತದಲ್ಲಿ 8 ಚೀತಾಗಳು ಬರುತ್ತಿವೆ.


–All India Radio News (@airnewsalerts)15 Sep 2022

5 ಗಂಡು ಹಾಗೂ 3 ಹೆಣ್ಣು ಚೀತಾಗಳು ನಮೀಬಿಯಾದಿಂದ ಭಾರತಕ್ಕೆ ಬರಲಿದೆ. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮ ದಿನದ ಸಂದರ್ಭದಲ್ಲಿ ಈ ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಿದ್ದಾರೆ.
ಚೀತಾಗಳನ್ನು ಕರೆತರಲು ಹೊರಟ ವಿಶೇಷ ವಿಮಾನನಮೀಬಿಯಾದಿಂದ ಚೀತಾಗಳನ್ನು ಕರೆತರಲು ವಿಶೇಷ ವಿಮಾನವನ್ನು ಸಜ್ಜುಗೊಳಿಸಲಾಗಿದೆ. ಇದಕ್ಕಾಗಿ ವಿಮಾನದ ಮುಂಭಾಗದಲ್ಲಿ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯ ಚಿತ್ರ ಚಿತ್ರಿಸಲಾಗಿದೆ. ಇದೀಗ ನಮೀಬಿಯಾ ತಲುಪಿರುವ ಈ ವಿಮಾನದ ಚಿತ್ರವನ್ನು ನಮೀಬಿಯಾದಲ್ಲಿರುವ ಭಾರತದ ಹೈ ಕಮಿಷನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.(ಏಜೆನ್ಸೀಸ್)
A special bird touches down in the Land of the Brave to carry goodwill ambassadors to the Land of the Tiger.#AmritMahotsav#IndiaNamibiapic.twitter.com/vmV0ffBncO— India In Namibia (@IndiainNamibia)September 14, 2022
A special bird touches down in the Land of the Brave to carry goodwill ambassadors to the Land of the Tiger.#AmritMahotsav#IndiaNamibiapic.twitter.com/vmV0ffBncO
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
