ನೆಲ್ಲೂರು:ಆಮ್ಲಜನಕದ ಕೊರತೆಯಿಂದ ಎಂಟು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಎಂಟು ರೋಗಿಗಳಲ್ಲಿ ಆರು ಮಂದಿಯನ್ನು ಆಸ್ಪತ್ರೆಯ ವೈದ್ಯಕೀಯ ತೀವ್ರ ನಿಗಾ ಘಟಕ (ಎಂಐಸಿಯು) ವಾರ್ಡ್‌ಗೆ ದಾಖಲಿಸಲಾಗಿತ್ತು. ಆದರೆ ಈ ರೋಗಿಗಳು ಮೃತಪಟ್ಟಿದ್ದು, ಆಮ್ಲಜನಕದ ಕೊರತೆ ಹಾಗೂ ಆಸ್ಪತ್ರೆಯ ಅಧಿಕಾರಿ, ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.ಇದನ್ನೂ ಓದಿ:ಫುಡ್‌ಕೋರ್ಟ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ  – ಮೇಯರ್ ವಿನಾಯಕ ಜತೆ ಅಧಿಕಾರಿಗಳ ಭೇಟಿಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ಅಧಿಕಾರಿಗಳು ಆಮ್ಲಜನಕದ ಕೊರತೆಯಿಂದ ಯಾವುದೇ ರೋಗಿಗಳು ಸಾವನ್ನಪ್ಪಿಲ್ಲ. ಬದಲಾಗಿ  ರೋಗಿಗಳು ಅವರಿಗಿದ್ದ ಕಾಯಿಲೆಗಳಿಂದ ಮಾತ್ರ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಹೇಳಿದ್ದಾರೆ.ಈ ಕುರಿತು ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು ಮಧ್ಯ ಪ್ರವೇಶಿಸಿ, ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಆದರೆ, ಆಸ್ಪತ್ರೆಯ ಸೂಪರೆಡೆಂಟ್​​ ವರದಿಯಲ್ಲಿ ರೋಗಿಗಳು ಮತ್ತು ಆಮ್ಲಜನಕದ ಕೊರತೆಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಉಲ್ಲೇಖಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
