ಬಿಬಿಪುರ:ಭೀಕರ ಅಪಘಾತವೊಂದರಲ್ಲಿ ಎಂಟು ಜನರು ಮೃತಪಟ್ಟು, 12 ಜನರು ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್‌ನ ಭಿವಾನಿ ರಸ್ತೆಯ ಬಿಬಿಪುರ ಗ್ರಾಮದ ಬಳಿ ನಡೆದಿದೆ.ಇದನ್ನೂ ಓದಿ:ಪಶ್ಚಿಮ ಬಂಗಾಳ ಪಂಚಾಯತ್​ ಚುನಾವಣೆ; ಹಿಂಸಾಚಾರಕ್ಕೆ 9 ಜನರ ಸಾವು
ಇಂದು ಬೆಳಿಗ್ಗೆ ಜಿಂದ್ ಬಸ್ ನಿಲ್ದಾಣದಿಂದ 9:30ರ ಸುಮಾರಿಗೆ ಹೊರಟ ಬಸ್​ ಬೀಬಿಪುರ ಗ್ರಾಮದ ಬಳಿ ತಲುಪುತ್ತಿದ್ದಂತೆಯೇ ಎದುರಿನಿಂದ ಬರುತ್ತಿದ್ದ ಕ್ರೂಸರ್ ಜೀಪ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದ್ದು, ಅಪಘಾತದ ಸದ್ದು ಕೇಳಿ ಸುತ್ತಮುತ್ತಲ ಜನರು ಕ್ರೂಸರ್‌ನಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಜನರು ಪ್ರಯತ್ನಿಸಿದರು.ಆದರೆ ಅನೇಕ ಜನರು ವಾಹನದಲ್ಲಿ ಸಿಲುಕಿಕೊಂಡ ಪರಿಣಾಮ, ಸಾಕಷ್ಟು ಪ್ರಯತ್ನದ ನಂತರವೂ ಜನರು ಅಸಹಾಯಕರಾಗಿ ನೋಡುತ್ತಿದ್ದರು. ಈ ಅಪಘಾತದಲ್ಲಿ ಗಾಯಗೊಂಡಿದ್ದ 7 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.ಇದನ್ನೂ ಓದಿ:ಇನ್ಮುಂದೆ ಒಂದು ಒವರ್​ನಲ್ಲಿ ಎರಡು ಬೌನ್ಸರ್, ಹೊಸ ನಿಯಮ ಪ್ರಕಟಿಸಿದ ಬಿಸಿಸಿಐಇನ್ನು ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯನಡೆಸಿ ಗಾಯಾಳುಗಳನ್ನು ತಕ್ಷಣ ಜಿಂದ್ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಮೃತರ ಗುರುತಿಗಾಗಿ ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − 10 =
Remember me
