ಶ್ರೀನಗರ:ಇಲ್ಲಿನ ಬಂಡಿಪೊರಾ ಜಿಲ್ಲೆಯ ಬಿಜೆಪಿ ಮುಖಂಡ ಶೇಖ್​ ವಾಸಿಂ ಬಾರಿ ಹಾಗೂ ಅವರ ಸಹೋದರ, ತಂದೆಯನ್ನು ನಿನ್ನೆ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಶೇಖ್​ ವಾಸಿಂ ಅವರು ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಹೌದು. ಪ್ರಕರಣತ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಇಂದು ಶೇಖ್​ ವಾಸಿಂ ಅವರ ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಶೇಖ್​ ವಾಸಿಂ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಂಟು ಮಂದಿ ಸೆಕ್ಯೂರಿಟಿ ಗಾರ್ಡ್​ಗಳನ್ನು ಬಂಧಿಸಿರುವ ಪೊಲೀಸರು ಅವರನ್ನೆಲ್ಲ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಡಿಪೊರಾ ಪಟ್ಟಣದ ಮುಸ್ಲಿಮಾಬಾದ್​ನಲ್ಲಿರುವ ಅಂಗಡಿ ನಡೆಸುತ್ತಿದ್ದ ಶೇಖ್​ ವಾಸಿಂ, ಅವರ ತಂದೆ ಮತ್ತು ಸಹೋದರನನ್ನು ಅದೇ ಅಂಗಡಿಯಲ್ಲಿ ಉಗ್ರರು ಗುಂಡು ಹಾರಿಸಿ ಕೊಂದಿದ್ದರು. ಶೇಖ್​ ವಾಸಿಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅವರ ತಂದೆ ಮತ್ತು ಸಹೋದರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. (ಏಜೆನ್ಸೀಸ್​)
ಗುಂಡಿನ ಮಳೆಗರೆದು ಬಿಜೆಪಿ ನಾಯಕನ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seventeen =
Remember me
