ಮುಂಬೈ:ಬಹುಮಹಡಿ ಕಟ್ಟಡ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಕಾಂದಿವಲಿ ಪಶ್ಚಿಮ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಗ್ಲೋರಿ ವಾಲ್ಫಾಟಿ (43) ಮತ್ತು ಜೋಸು ಜೆಮ್ಸ್ ರಾಬರ್ಟ್ (8) ಎಂದು ಗುರುತಿಸಲಾಗಿದೆ. ಗಾಯಗೊಂಡವರ ಪೈಕಿ ಓರ್ವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
VIDEO | Fire breaks out at Veena Santoor building in Mumbai. Fire tenders are at the spot. More details are awaited.pic.twitter.com/65XAu9PYF0
ಇದನ್ನೂ ಓದಿ:ಮಹುವಾ ಮೊಯಿತ್ರಾ ಜತೆಗಿನ ಫೋಟೋ ವೈರಲ್; ಇದು ಕೀಳುಮಟ್ಟದ ರಾಜಕೀಯ ಎಂದ ಶಶಿ ತರೂರ್
ಈ ಕುರಿತು ಪ್ರತಿಕ್ರಿಯಿಸಿರುವ ಬಿಎಂಸಿಯ ಹಿರಿಯ ಅಧಿಕಾರಿಯೊಬ್ಬರು, ಮೊದಲನೇ ಮಹಡಿಯಲ್ಲಿ ವಿದ್ಯುತ್​ ಸಂಬಂಧಿತ ಕೆಲಸ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಥದಲ್ಲಿ ಇಡೀ ಕಟ್ಟಡವನ್ನೆ ಆವರಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಓರ್ವ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಯ ಹಿರಿಯ ಅಧಿಕಾರೊಯೊಬ್ಬರು ತಿಳಿಸಿದ್ದಾರೆ.
#WATCH| Mumbai Fire | Visuals from Pavan Dham Veena Santur Building of Mahaveer Nagar in Kandivali West where a fire broke out earlier today and claimed two lives.pic.twitter.com/YGUykYd7dN
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:4 + 17 =
Remember me
